ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಮಾ. 27 ರಂದು ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಎರಡನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಇಂದು ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಘಟಕ ಅಧ್ಯಕ್ಷರಾದ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಂದು ಪಾವಂಜೆ ಮೇಳದವರಿಂದ ಭಾರತ ವರ್ಷಿಣಿ ಯಕ್ಷಗಾನ ಪ್ರದರ್ಶನ ಹಾಗೂ ಸಾಧಕರಾದ ಹಿರಿಯ ಯಕ್ಷಗಾನ ಕಲಾವಿದರು ಶ್ರೀ ಕೆ.ಗೋವಿಂದ ಭಟ್ ಹಾಗೂ ಹಿರಿಯ ರಂಗಭೂಮಿ ಕಲಾವಿದರಾದ ಶ್ರೀ ಡಿ.ಎಸ್. ಬೋಳೂರು ಅವರನ್ನು ಸನ್ಮಾನಿಸಲಾಗುವುದು. ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಸಮಿತಿ ಸದಸ್ಯರು, ಯಕ್ಷಾಭಿಮಾನಿಗಳು ತನು,ಮನ,ಧನಗಳಿಂದ ಸಹಕರಿಸುವಂತೆ ವಿನಂತಿಸಲಾಯಿತು. ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಘಟಕ ಪ್ರ.ಕಾರ್ಯದರ್ಶಿ ದೇವದಾಸ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಮೋಹನ್ ದಾಸ್ ಕೊಟ್ಟಾರಿ ವಂದಿಸಿದರು.