ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವವು ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹವ್ಯಾಸಿ ಯಕ್ಷಗಾನ ಕಲಾವಿದ ಜಿನೇಂದ್ರ ಜೈನ್, ಯಕ್ಷಶಿಕ್ಷಣ ಯೋಜನೆಯ ಗುರುಗಳಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಭಾಗವತರಾದ ದೇವಿಪ್ರಸಾದ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. “ರಜತ ಯಕ್ಷಪಯಣ ಮಾಡುತ್ತಿರುವ ಪಟ್ಲ ಸತೀಶ್ ಶೆಟ್ಟಿ” ಇವರನ್ನು ಘಟಕದ ವತಿಯಿಂದ ವಿಶೇಷವಾಗಿ ಗೌರವಿಸಲಾಯಿತು.
ಬಂಟ್ವಾಳ ವಿಧಾನಸಭೆ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಘಟಕದ ಗೌರವ ಮಾರ್ಗದರ್ಶಕರು ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಗೌರವಾಧ್ಯಕ್ಷರಾದ ಪುರುಷೋತ್ತಮ ಪೂಜಾರಿ ಬುಳೆಕ್ಕಿನಕೋಡಿ, ಕೇಂದ್ರೀಯ ಸಮಿತಿಯ ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಮತ್ತಿತರ ಗಣ್ಯರು ಸಭಾವೇದಿಕೆಯಲ್ಲಿದ್ದರು.
ಘಟಕದ ಸರ್ವ ಪದಾಧಿಕಾರಿಗಳು, ಮಹಿಳಾ ಘಟಕದ ಸರ್ವ ಪದಾಧಿಕಾರಿಗಳು, ಉಪಸ್ಥಿತರಿದ್ದರು. ಪುಂಜಾಲಕಟ್ಟೆ ಘಟಕದ ಅಧ್ಯಕ್ಷರಾದ ಯಶೋಧರ ಶೆಟ್ಟಿ ದಂಡೆ ಇವರು ಸ್ವಾಗತಿಸಿ, ಉಪಾಧ್ಯಕ್ಷರಾದ ಅಶೋಕ್ ಗುಂಡ್ಯಲ್ಕೆ ವಂದಿಸಿದರು. ರತ್ನದೇವ್ ಪುಂಜಾಲಕಟ್ಟೆ ಇವರು ಕಾರ್ಯಕ್ರಮ ನಿರೂಪಿಸಿದರು.