ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಉಪ್ಪಳ ಘಟಕದ 7ನೇ ವಾರ್ಷಿಕೋತ್ಸವವು ಶ್ರೀಹರಿ ಭಜನಾ ಮಂದಿರ ಕುಳೂರು ಇಲ್ಲಿ ಉಪ್ಪಳ ಘಟಕದ ಗೌರವಾಧ್ಯಕ್ಷರಾದ ಶ್ರೀ ಪಿ. ಆರ್. ಶೆಟ್ಟಿ ಪೊಯ್ಯೇಲು ಕುಳೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ವೇದಮೂರ್ತಿ ಗಣೇಶ ನಾವಡ ಮೀಯಪದವು, ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ ಮತ್ತಿತರರು ಉಪಸ್ಥಿತರಿದ್ದರು.
ಘಟಕದ ಸಂಚಾಲಕರು ಯೋಗೀಶ್ ರಾವ್ ಚಿಗುರುಪಾದೆ ಸ್ವಾಗತಿಸಿದರು. ಜಯಪ್ರಕಾಶ್ ಇವರು ನಿರೂಪಿಸಿ ವಂದಿಸಿದರು.