yakshadhruvapatlafoundation.org

ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ರಮ್ಯ ಅದ್ಬುತ ಕಲೆ ಎಂದು ಗಿರೀಶ್ ಶೆಟ್ಟಿ ಅಧ್ಯಕ್ಷರು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು ಎಕ್ಕಾರು ಘಟಕ ಇವರು ಅಭಿಪ್ರಾಯಪಟ್ಟರು.

ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಜೂನ್ 15, ಇಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇದರ ವತಿಯಿಂದ ನಡೆಯುವ ಎರಡನೇ ವರ್ಷದ ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ಶ್ರೀಯುತ ರತ್ನಾಕರ ಶೆಟ್ಟಿ ಅಧ್ಯಕ್ಷರು ಬಂಟರ ಸಂಘ ಎಕ್ಕಾರು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಯುತ ಗಿರೀಶ್ ಶೆಟ್ಟಿ ಅಧ್ಯಕ್ಷರು, ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು ಎಕ್ಕಾರು ಘಟಕ ಇವರು ವಹಿಸಿದ್ದರು. ಯಕ್ಷ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣಕ್ಕೆ ಸಂಬಂಧಿಸಿ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಿಸಲಾಯಿತು. ವೇದಿಕೆಯಲ್ಲಿ ಶ್ರೀ  ಸುದೀಪ್ ಅಮೀನ್, ಎಕ್ಕಾರು ಘಟಕದ ಸಂಚಾಲಕರುಗಳಾದ  ಶ್ರೀ ಸತೀಶ್ ಶೆಟ್ಟಿ, ನಿತೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಭರತೇಶ ಶೆಟ್ಟಿ, ಶ್ರೀ ವಿಕ್ರಮ್ ಮಾಡ ಸದಸ್ಯರು ಗ್ರಾಮ ಪಂಚಾಯತಿ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಇಂದಿರಾ ಎನ್ ರಾವ್, ನೋಡಲ್ ಶಿಕ್ಷಕರಾದ ಡಾ. ಅನಿತ್ ಕುಮಾರ್  ಶ್ರೀ ರಾಜೇಂದ್ರ ಪ್ರಸಾದ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು.

ಘಟಕದ ಸಂಚಾಲಕರಾದ ಶ್ರೀಯುತ ನಿತೇಶ್ ಎಕ್ಕಾರು ಧನ್ಯವಾದ ಸಮರ್ಪಿಸಿದರು, ಶ್ರೀ ಶಿಕ್ಷಕಿ ಶ್ರೀಮತಿ ಚಿತ್ರಾಶ್ರೀ ಕಾರ್ಯಕ್ರಮ ನಿರೂಪಿಸಿದರು. ಯಕ್ಷ ಶಿಕ್ಷಕರಾದ ಶ್ರೀಯುತ ರಾಮ್ ಪ್ರಕಾಶ್ ಕಲ್ಲೂರಾಯ ವಿದ್ಯಾರ್ಥಿಗಳಿಗೆ ಪ್ರಾರಂಭಿಕ ಹೆಜ್ಜೆಗಳನ್ನ ಕಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹಿರಿಯ ಶಿಕ್ಷಕರಾದ ಪೂರ್ಣಿಮಾ ಎಚ್ಎಂ, ರಾಜಶ್ರೀ ಕೆ, ಶ್ರೀಮತಿ ವಿದ್ಯಾಲತಾ, ಶ್ರೀಮತಿ ವಿದ್ಯಾ ಗೌರಿ, ಶ್ರೀಮತಿ ರಮ್ಯಾ, ಶ್ರೀಮತಿ ಜಯಂತಿ, ಕುಮಾರಿ ನಿಶ್ಮಿತಾ ಹಾಗೂ ಪೋಷಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದಕ್ಷಿಣ ಭಾರತ ವಲಯ ಮಟ್ಟದ ಕೋ ಕೋ ಪಂದ್ಯಾಟವು ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾ ನಿಲಯ ವಿಜಯವಾಡ ಆಂಧ್ರಪ್ರದೇಶ ಇಲ್ಲಿ ನಡೆಯುವ ಕೋಕೋ ಪಂದ್ಯಾಟದಲ್ಲಿ ಪಾಲ್ಗೊಳ್ಳುವ 8 ಮಂದಿ ವಿದ್ಯಾರ್ಥಿಗಳನ್ನು ಹಾಗೂ ದೈಹಿಕ  ಶಿಕ್ಷಣ ಶಿಕ್ಷಕಿ ವಿದ್ಯಾಲತಾ ಇವರಿಗೆ ಶುಭ ಹಾರೈಸಲಾಯಿತು. 130 ಯಕ್ಷ ಶಿಕ್ಷಣದಲ್ಲಿ ಭಾಗವಹಿಸಿದರು.

[Best_Wordpress_Gallery id=”102″ gal_title=”‘ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮ ಯಕ್ಷಗಾನ’: ಗಿರೀಶ್ ಶೆಟ್ಟಿ”]

Leave a Reply

Your email address will not be published. Required fields are marked *