ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ ಮಾ.28ರಂದು ಮಂಗಳೂರಿನ ಪುರಭವನದಲ್ಲಿ ಜರುಗಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕದ್ರಿ ಸರ್ಕಾರಿ ಹಿರಿಯ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್ ಮಾತನಾಡಿ, ಯಕ್ಷಗಾನ ಕಲಾವಿದರ ಆಶಾಕಿರಣವಾಗಿರುವ ಯಕ್ಷಧ್ರುವ ಪಟ್ಲ ಸಂಘಟನೆಯ ಸೇವಾ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದರು.
ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಶುಭ ಹಾರೈಸಿದರು. ಯಕ್ಷಗಾನ ಸಂಘಟಕ ಸುಂದರ ಶೆಟ್ಟಿ ಬೆಟ್ಟಂಪಾಡಿ, ಲಕುಮಿ ನಾಟಕ ತಂಡದ ಸ್ಥಾಪಕ ಕಿಶೋರ್ ಡಿ.ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಮಂಗಳೂರು ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಆಳ್ವ ಕದ್ರಿ, ಟ್ರಸ್ಟಿ ವಸಂತ ಶೆಟ್ಟಿ, ರಾಜೇಶ್ ಶೆಟ್ಟಿ ಶಬರಿ, ಯಕ್ಷಗಾನ ಅಕಾಡೆಮಿಯ ಸದಸ್ಯ ಮೋಹನ್ ಕೊಪ್ಪಳ, ಗೋಪಿನಾಥ ಶೆಟ್ಟಿ, ಕೃಷ್ಣ ಶೆಟ್ಟಿ ತಾರೆಮಾರ್ ಇದ್ದರು. ತಾರಾನಾಥ ಶೆಟ್ಟಿ ಸ್ವಾಗತಿಸಿದರು. ಆರತಿ ಆಳ್ವ ವಂದಿಸಿದರು. ಸತೀಶ್ ಶೆಟ್ಟಿ ನಿರೂಪಿಸಿದರು.