yakshadhruvapatlafoundation.org

ಸರಕಾರಿ ಪ್ರೌಢ ಶಾಲೆ ಕಡೇಶಿವಾಲಯ: ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನಾ ಸಮಾರಂಭ

ಯಕ್ಷಗಾನ ಕಲೆ ನಮ್ಮಲ್ಲಿ ನೈತಿಕತೆ ಮತ್ತು ಬೌದ್ಧಿಕ ಮಟ್ಟವನ್ನು ಹೆಚ್ಚಿಸಿ ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ

ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ-ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

ಯಕ್ಷಧ್ರುವ ಫೌಂಡೇಶನ್ (ರಿ.) ಮಂಗಳೂರು ವತಿಯಿಂದ ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ – ಯಕ್ಷ ಶಿಕ್ಷಣ ತರಗತಿಯನ್ನು ಯಕ್ಷ ಧ್ರುವ ಫೌಂಡೇಶನ್ ಮುಡಿಪು ಘಟಕದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರು ಉದ್ಘಾಟಿಸಿದರು.

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

ದಿನಾಂಕ 01.07.2024 ರಂದು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಪ್ರಾಯೋಜಿತ ಯಕ್ಷ ಶಿಕ್ಷಣ ನಾಟ್ಯ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆಯಿತು. ಯಕ್ಷ ಧ್ರುವ ಪಟ್ಲ ಫೌಂಡೇಶನ್, ವಿಟ್ಲ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

ಯಕ್ಷಧ್ರುವ ಯಕ್ಷ ಶಿಕ್ಷಣ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಳ್ಳಿ, ಇಲ್ಲಿ ‘ಯಕ್ಷಧ್ರುವ ಯಕ್ಷ ಶಿಕ್ಷಣ’  ಯಕ್ಷಗಾನ ತರಗತಿಯನ್ನು ಯಕ್ಷಗಾನ ಗುರುಗಳಾದ ಸುರೇಶ್ ಆಚಾರ್ಯ ಮರ್ಣೆಯವರಿಂದ ಚಾಲನೆಗೊಂಡಿತು. ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

“ಯಕ್ಷ ಧ್ರುವ- ಯಕ್ಷ ಶಿಕ್ಷಣ” ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ, ಶ್ರೀ ರಾಮ ಶಾಲೆ: 2024-25

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು, ಉರಿಮಜಲು ಕೆ ರಾಮ ಭಟ್ ಸಭಾಂಗಣ, ಶ್ರೀ ರಾಮ ಶಾಲೆ, ವೇದಶಂಕರ ನಗರ, ಉಪ್ಪಿನಂಗಡಿಯಲ್ಲಿ ಜರಗಿತು.

ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ

ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಭಾಗವಹಿಸಿದರು.

“ಯಕ್ಷ ಧ್ರುವ- ಯಕ್ಷ ಶಿಕ್ಷಣ ” ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ, ಮಣಿನಾಲ್ಕೂರು: 2024-25

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು, ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಮಣಿನಾಲ್ಕೂರು ಇಲ್ಲಿ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷರಾದ ಶ್ರೀ ಶಶಿಕಾಂತ್ ಶೆಟ್ಟಿ ಆರುಮುಡಿ ಇವರಿಂದ ಉದ್ಘಾಟಿಸಲ್ಪಟ್ಟಿತು.

ಪಟ್ಲ ಯಕ್ಷಾಶ್ರಯದ ಫಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣೆ

ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗಳಿಗೆ, ಹಾಗೂ ಕಲಾವಿದರ ತುರ್ತು ಆರೋಗ್ಯ ಚಿಕಿತ್ಸಾ ವೆಚ್ಚಕ್ಕೆ  ಸುಮಾರು 20 ಲಕ್ಷ ರೂಪಾಯಿ ಮೊತ್ತದ ಚೆಕ್ಕನ್ನು ವಿತರಿಸಲಾಯಿತು.