yakshadhruvapatlafoundation.org

ಪ್ರಶಸ್ತಿ ಸಿಗದಿದ್ದರೂ ಕಲಾವಿದ ಸಣ್ಣವನಾಗಲ್ಲ: ರಾಮಚಂದ್ರ ಹೆಗಡೆ

ಈ ಪ್ರಶಸ್ತಿ ನನಗೆ ಸಿಕ್ಕಿದ್ದುಅಲ್ಲವೇ ಅಲ್ಲ. ನನ್ನ ಅಜ್ಜ ಮತ್ತು ಗುರು ಕೊಂಡದಕುಳಿ ರಾಮ ಹೆಗಡೆ, ನನ್ನನ್ನು ಬೆಳೆಸಿದ ಕಾಳಿಂಗ ನಾವಡರಿಗೆ ಸಿಗಬೇಕಾದ ಪ್ರಶಸ್ತಿ ಇದು. ಹಿಂದಿನ ತಲೆಮಾರಿನ ಅನೇಕ ಕಲಾವಿದರು ಊರಿಂದ ಊರಿಗೆ ನಡೆದುಹೋಗಿ ಯಕ್ಷಗಾನ ಕಲೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ್ದಾರೆ. ಯಕ್ಷಗಾನಕ್ಕೆ ಬದುಕನ್ನೇ ಸವೆಸಿದ್ದಾರೆ. ಅವರಿಗೆ ಪ್ರಶಸ್ತಿಯೂ ಇಲ್ಲ, ಸಂಬಳವೂ ಇಲ್ಲ. ಅದರ ಫಲವನ್ನು ಈಗಿನ ತಲೆಮಾರಿನವರು ಅನುಭವಿಸುತ್ತಿದ್ದೇವೆ. ತೆಂಕುತಿಟ್ಟು ಆಗಲಿ, ಬಡಗು ಆಗಲಿ, ಬಡಾಬಡಗು ಆಗಲಿ ಯಕ್ಷಗಾನ ಕಲಾವಿದರು ಪರಸ್ಪರ ಗೌರವಿಸುವುದನ್ನು ಮೊದಲು ಕಲಿಯಬೇಕು

ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಪ್ರಧಾನ

ಯುವಜನತೆ ಯಕ್ಷಗಾನದಿಂದ ದೂರವಾಗುತ್ತಿರುವ ಈ  ಆಧುನಿಕ ಕಾಲಘಟ್ಟದಲ್ಲಿ ಸೋಷಿಯಲ್ ಮೀಡಿಯಾದಲ್ಲೂ ಯಕ್ಷಗಾನದ ವೈಭವ ಮರುಕಳಿಸುವಲ್ಲಿ ಯಕ್ಷಧ್ರುವ ಪಟ್ಲ ಟ್ರಸ್ಟ್ ಶ್ರಮ ಶ್ಲಾಘನೀಯವಾದುದು. ತುಳುನಾಡಿನ ಕಲೆಯನ್ನು ಮರಳಿ ಉಳಿಸುವಲ್ಲಿ ಪಟ್ಲ ಸತೀಶ್ ಶೆಟ್ಟಿಯವರ ಯೋಜನೆ ಮತ್ತು ಯೋಚನೆ ಇದೇ ರೀತಿ ಮುಂದುವರಿಯಲಿ

ಸಾರ್ಥಕ್ಯ ಕಂಡ ಪಟ್ಲ ಸಂಭ್ರಮ 2024

2024ರ ಪಟ್ಲ ಸಂಭ್ರಮವು ನಿಜ ಅರ್ಥದಲ್ಲಿ ಸಾರ್ಥಕ್ಯ ಪಡೆದಿದೆ ಎಂದರೆ ಖಂಡಿತವಾಗಿ ಅತಿಶಯದ ಮಾತಲ್ಲ. ಸದಾ ಮಂಗಲಮಯನಾದ ಅಡ್ಯಾರ್ ನ ಮಹಾಲಿಂಗೇಶ್ವರನ ಸನ್ನಿಧಾನದ ಪಕ್ಕದಲ್ಲಿ ನಡೆದ ಈ ಕಾರ್ಯಕ್ರಮವು ಸದಾಶಿವ ಶಶಿಧರನ ಅನುಗ್ರಹದಿಂದ ಹರಿ ಈಶರ ಪೂರ್ಣನುಗ್ರಹದೊಂದಿಗೆ ನಮ್ಮೆಲ್ಲರ ನಿರೀಕ್ಷೆಯಂತೆ ಸಂಪೂರ್ಣ ಯಶಸ್ಸಾಯಿತು ಎಂಬುದು ಎಲ್ಲರ ಉದ್ಘಾರ.

ಮೂಡಬಿದರೆ ಘಟಕದ 8ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ) ಮಂಗಳೂರು ಮೂಡಬಿದರೆ ಘಟಕದ 8ನೇ ವಾರ್ಷಿಕೋತ್ಸವವು ಎರಡು ದಿನಗಳ ಪರ್ಯಂತ ಅಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಬೋಳಿಯಾರಿನಲ್ಲಿ ಯಕ್ಷಗಾನ ಬಯಲಾಟ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು – ಮುಡಿಪು ಘಟಕದ ಆಶ್ರಯದಲ್ಲಿ ಬೋಳಿಯಾರಿನಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ರಾಜಾರಾಮ್ ಭಟ್ ಕೈರಂಗಳ, ಸಂತೋಷ್ ಕುಮಾರ್ ಬೋಳಿಯಾರ್, ವಿನಯಕೃಷ್ಣ ಭಟ್ ಮುಡಿಪು ಮತ್ತಿತರ  ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ರಾಜಾರಾಮ್ ಭಟ್ ಇವರು ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ಜನಪರ ಕಾರ್ಯಗಳಿಗೆ  ರೂ. 50,000 ಮೊತ್ತವನ್ನು ದೇಣಿಗೆಯಾಗಿ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಇವರಿಗೆ ಹಸ್ತಾಂತರಿಸಿದರು.

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ “ಪಟ್ಲ ಸಂಭ್ರಮ” ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್ ನ ಎಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಸಕ್ರೀಯವಾಗಿ ಭಾಗವಹಿಸುವಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.

ಪಟ್ಲ ಯಕ್ಷಾಶ್ರಯದ 30ನೇ ಮನೆ ಹಸ್ತಾಂತರ

ಪಟ್ಲ ಯಕ್ಷಾಶ್ರಯ ಯೋಜನೆಯ 30 ನೇ ಗೃಹಪ್ರವೇಶ 12/05/24 ಆದಿತ್ಯವಾರ ಕಾಸರಗೋಡು ಜಿಲ್ಲೆಯ ಕುಂಬ್ಳೆ ನೀರ್ಚಾಲ್ ನಲ್ಲಿ ನಡೆಯಿತು.
ಈ ಮನೆಯ ಕೊಡುಗೈ ದಾನಿಗಳು ಶ್ರೀ ಕೆ.ಕೆ ಶೆಟ್ಟಿ ಅಹಮದ್ ನಗರ

ಬಂಟ್ವಾಳ ತಾಲೂಕು ಘಟಕದ ಸಭೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ಸಭೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಶನಿವಾರ ಸಂಜೆ ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಸುರತ್ಕಲ್ ಘಟಕದ 4ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು- ಸುರತ್ಕಲ್ ಘಟಕದ 4ನೇ ವಾರ್ಷಿಕೋತ್ಸವವು ಸುರತ್ಕಲ್ ಭಂಟರ ಭವನದ ಆವರಣದಲ್ಲಿ ನಡೆಯಿತು. ಸುರತ್ಕಲ್ ಘಟಕದ ಅಧ್ಯಕ್ಷರಾದ ಸುಧಾಕರ ಎಸ್. ಪೂಂಜ ಸ್ವಾಗತಿಸಿ ಜಗನ್ನಾಥ ಶೆಟ್ಟಿ ಬಾಳ ಇವರು ಪ್ರಸ್ತಾವನೆಗೈದರು.