ಓಂ ಫ್ರೆಂಡ್ಸ್ ಕ್ಲಬ್ (ರಿ) ಕಳ್ಳಿಗೆ- ಪಚ್ಚಿನಡ್ಕ ಇದರ ರಜತ ಸಂಭ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಖ್ಯಾತ ಹಾಸ್ಯಗಾರರು ಬಂಟ್ವಾಳ ಜಯರಾಮ ಆಚಾರ್ಯ ಇವರ ಸಂಸ್ಮರಣೆ ಮತ್ತು ಧನಸಹಾಯ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಜಯರಾಮ ಆಚಾರ್ಯರ ಮನೆಯವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿ ಮನೆ ನಿರ್ಮಿಸಿ ಕೊಡುವ ಬಗ್ಗೆ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಘೋಷಿಸಿದರು.
ಓಂ ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷರಾದ ಭುವನೇಶ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಬಂಟ್ವಾಳ ಘಟಕದ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.