ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು ಶ್ರೀರಾಮ ವಿದ್ಯಾ ಸಂಸ್ಥೆಗಳು, ಅರ್ಕುಳ ಫರಂಗಿಪೇಟೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎ. ಕೆ. ಜಯರಾಮ ಶೇಕ ಇವರ ಅಧ್ಯಕ್ಷತೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಅರ್ಕುಳ ಬೀಡು ವಜ್ರನಾಭ ಶೆಟ್ಟಿ ಇವರು ನಡೆಸಿಕೊಟ್ಟರು.
ಯಕ್ಷಧ್ರುವ ಯಕ್ಷಶಿಕ್ಷಣ ತರಗತಿಯ ಪ್ರಧಾನ ಸಂಚಾಲಕರಾದ ವಾಸುದೇವ ಐತಾಳ ಪ್ರಸ್ತಾವನೆಗೈದರು. ಬಂಟ್ವಾಳ ಘಟಕದ ಅಧ್ಯಕ್ಷರಾದ ಚಂದ್ರಹಾಸ ಡಿ. ಶೆಟ್ಟಿ, ಟ್ರಸ್ಟಿಗಳಾದ ಜಯಶೀಲ ಅಡ್ಯಾಂತಾಯ, ಟ್ರಸ್ಟಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಶ್ರೀಮತಿ ಭುವನೇಶ್ವರಿ ಶೆಟ್ಟಿ ನಿರೂಪಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಜಯಕುಮಾರ್ ವಂದಿಸಿದರು. ಯಕ್ಷಶಿಕ್ಷಣದ ತರಬೇತುದಾರರಾದ ರಕ್ಷಿತ್ ಶೆಟ್ಟಿ ಪಡ್ರೆ ಇವರು ಪ್ರಾಥಮಿಕ ಹೆಜ್ಜೆ ಕಲಿಸಿ ತರಬೇತಿಗೆ ಚಾಲನೆ ನೀಡಿದರು.