ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಮಂಗಳೂರು, ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರಿನಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಜೀವ ವಿಮಾ ನಿಗಮ ಬೆಳ್ತಂಗಡಿ ಇದರ ಅಭಿವೃದ್ಧಿ ಅಧಿಕಾರಿ ಉದಯ ಶಂಕರ ಜಿ ಕಾರ್ಯಕ್ರಮ ಉದ್ಘಾಟಿಸಿದರು.
ಯಕ್ಷಧ್ರುವ – ಯಕ್ಷ ಶಿಕ್ಷಣ ತಂಡದ ಗುರುಗಳಾದ ಈಶ್ವರ ಪ್ರಸಾದ್ ನಿಡ್ಲೆರವರು ವಿದ್ಯಾರ್ಥಿಗಳಿಗೆ ಹೆಜ್ಜೆ ಅಭ್ಯಾಸ ಮಾಡಿಸಿದರು. ಈ ಸಂದರ್ಭ ಶಾಲಾ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು, ಸದಸ್ಯರು, ಶಾಲಾ ಆಡಳಿತ ಸಮಿತಿ ಸಂಚಾಲಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಉಪಸ್ಥಿರಿದ್ದರು.