ಬಂಟ್ವಾಳ ತಾಲೂಕಿನ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಎರಡನೇ ವರ್ಷದ ಯಕ್ಷ ಧ್ರುವ ಯಕ್ಷ ಶಿಕ್ಷಣದ ಉದ್ಘಾಟನೆಯು ಈ ದಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಅಧ್ಯಕ್ಷತೆಯಲ್ಲಿ ನೆರವೇರಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು.
ಖ್ಯಾತ ಯಕ್ಷಗಾನ ಕಲಾವಿದ ಸರಪ್ಪಾಡಿ ಅಶೋಕ್ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯಶಿಕ್ಷಕಿ ಶ್ರೀಮತಿ ಪ್ರೇಮ, ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಕಾರ್ಯದರ್ಶಿ ಮೋಹನದಾಸ್ ಕೊಟ್ಟಾರಿ, ಯಕ್ಷ ಗುರುಗಳಾದ ಓಂ ಪ್ರಕಾಶ್, ಮಾತೃ ಸಮಿತಿಯ ಅಧ್ಯಕ್ಷೆ ಪ್ರಿಯಾ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.