ಕರ್ನಾಟಕ ಸಂಭ್ರಮ-50 ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರುಗಳಿಗೆ 2024ನೇ ಸಾಲಿನಲ್ಲಿ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದು, 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(ಸುವರ್ಣ ಮಹೋತ್ಸವ ಪ್ರಶಸ್ತಿ) ಗೆ ಕೊಡುಗೈ ದಾನಿಗಳೂ, ಶ್ರೇಷ್ಠ ಉದ್ಯಮಿಯಾಗಿ ಸಹಸ್ರಾರು ಕುಟುಂಬಗಳಿಗೆ ಉದ್ಯೋಗದಾತರಾಗಿ, ಅನ್ನದಾತರಾಗಿ ತುಳುನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಭೂಪಟದಲ್ಲಿ ಮಿನುಗಿಸಿದ, ಮಾರ್ಗದರ್ಶಕರಾದ ಮಂಗಳೂರು ಕನ್ಯಾನ ಸದಾಶಿವ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಇವರು ಪಟ್ಲ ಫೌಂಡೇಶನ್ ಟ್ರಸ್ಟಿನ ಗೌರವಾಧ್ಯಕ್ಷರೂ ಆಗಿದ್ದಾರೆ. ಇವರಿಗೆ ಪಟ್ಲ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಸತೀಶ್ ಶೆಟ್ಟಿ, ಕೇಂದ್ರೀಯ ಸಮಿತಿ ಹಾಗೂ ಸರ್ವ ಪ್ರಾದೇಶಿಕ ಘಟಕಗಳ ಪದಾಧಿಕಾರಿಗಳ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ
Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...