ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ರಿ. ಇದರ 90ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ 9ನೇ ದಿನದ ಕಾರ್ಯಕ್ರಮ ಇಂದು ಹೊನ್ನಾವರ ಬಳಿಯ ಗುಣವಂತೆ ಇಲ್ಲಿ ನಡೆಯಿತು.
ಇದರ ಪ್ರಯುಕ್ತ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಕಲಾಪೋಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀ ಮಹಾವಿಷ್ಣು ಕ್ಷೇತ್ರ ಕಾರ್ಮಾರು ಬ್ರಹ್ಮಕಲಶೋತ್ಸವ
ಯಕ್ಷಮಿತ್ರರು ಮಾನ್ಯ ಇವರ ಸಂಯೋಜನೆಯಲ್ಲಿ, ಶ್ರೀ ಮಹಾವಿಷ್ಣು ಕ್ಷೇತ್ರ ಕಾರ್ಮಾರು, ಮಾನ್ಯ ಇಲ್ಲಿನ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಶ್ರೀ ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರಿಗೆ ಗೌರವ ವಂದನೆ ಸಲ್ಲಿಸಲಾಯಿತು. ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಶ್ರೀಗಳು ಶಾಲು ಹೊದಿಸಿ, ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.