News
ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ
Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ...
ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ - 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್...
ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”
ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್‌ನಲ್ಲಿ "ಭಾರತ್ ಕಲಾ ವೈಭವ" ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ...
ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್...
A New Beginning: Housewarming Held for 36th Artist Home by Patla Foundation
Mangaluru, : The housewarming ceremony for an artist’s residence, an initiative by the Patla Foundation, was held on Wednesday, April 7. This marks the...
ಬೇಬಿ ಮತ್ತು ಬಾಲಕೃಷ್ಣ ಪುರುಷ ರಿಗೆ ಪಟ್ಲ ಯಕ್ಷಾಶ್ರಯದ 36ನೇ ಮನೆ
Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು...
With 36 Homes Delivered, Patla Foundation Breaks Ground on 20 More for Artists
One of the flagship initiatives of the Yaksha Dhurva Patla Foundation Trust is the Patla Yakshashraya project. Under this initiative, 36 houses have...
ಪಟ್ಲ ಯಕ್ಷಾಶ್ರಯದಡಿ 20 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶೃಂಗೇರಿ ಶ್ರೀಗಳು
Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ...
ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ
ಬಹ್ರೈನ್ – ಯಕ್ಷಧ್ರುವ ಪಟ್ಲ ಫೌಂಡೇಶನ್ ಬಹ್ರೈನ್ ಮತ್ತು ಸೌದಿ ಘಟಕವು ತಮ್ಮ ಮೂರನೇ ವಾರ್ಷಿಕ ರಕ್ತದಾನ ಶಿಬಿರವನ್ನು ಸಲ್ಮಾನಿಯಾ ಮೆಡಿಕಲ್ ಕಾಂಪ್ಲೆಕ್ಸ್‌ನ ಸೆಂಟ್ರಲ್ ಬ್ಲಡ್ ಬ್ಯಾಂಕ್‌ನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಸಂಜೆ 7:00 ಗಂಟೆಯಿಂದ ರಾತ್ರಿ 11:30ರವರೆಗೆ ನಡೆದ ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು.
ಜೂನ್ 1ರಂದು ಪಟ್ಲ ದಶಮ ಸಂಭ್ರಮ
ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.
ಯಕ್ಷಧ್ರುವ ಕಲಾವಿದರ ಆಶಾಕಿರಣ: ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಮಂಗಳೂರು ಘಟಕದ 6ನೇ ವಾರ್ಷಿಕ ಸಮಾರಂಭ ಮಾ.28ರಂದು ಮಂಗಳೂರಿನ ಪುರಭವನದಲ್ಲಿ ಜರುಗಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕದ್ರಿ ಸರ್ಕಾರಿ ಹಿರಿಯ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಬಂಟ್ವಾಳ ಘಟಕದ 2ನೇ ವಾರ್ಷಿಕೋತ್ಸವ: ಪೂರ್ವಭಾವಿ ಸಭೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಮಾ. 27 ರಂದು ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಎರಡನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಇಂದು ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಘಟಕ ಅಧ್ಯಕ್ಷರಾದ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪಟ್ಲ: ಮಹಿಳಾ ಘಟಕದ ವಾರ್ಷಿಕೋತ್ಸವ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕೇಂದ್ರೀಯ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವ ಸುರತ್ಕಲ್ ನ ಬಂಟರ ಭವನದಲ್ಲಿ ಈಚೆಗೆ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತಾ ಹೆಗ್ಡೆ ಹಾಗೂ ಸತ್ಯವತಿ ಡಿ. ಶೆಟ್ಟಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಯಕ್ಷಗಾನ ಕಲಾವಿದರಿಗೆ ನೆರವಾಗಿರುವ ಹೆಮ್ಮೆ: ಪಟ್ಲ
ಯಕ್ಷಗಾನ, ನಾಟಕ ಕಲಾವಿದರಿಗೆ ಸುಮಾರು 15 ಕೋಟಿ ರೂ. ವರೆಗೆ ನೆರವು ನೀಡಿರುವ ಹೆಮ್ಮೆ, ಯಕ್ಷಗಾನ ಕಲಾವಿದನಾದ ತನಗೆ ಇದೆ. ಇದಕ್ಕೆ ಅಭಿಮಾನಿಗಳ ಪ್ರೋತ್ಸಾಹವೇ ಕಾರಣ ಎಂದು ಯಕ್ಷಧ್ರುವ...
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಸನ್ಮಾನ
ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು – ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗೌರವಿಸುವುದರೊಂದಿಗೆ ಕಲಾವಿದರಾದ ಸುಬ್ರಾಯ ಹೊಳ್ಳ ಕಾಸರಗೋಡು, ಅಕ್ಷಯಕುಮಾರ್ ಮಾರ್ನಾಡ್ ಇವರನ್ನು ಜಿಲ್ಲಾ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು, ಸಂಘಟಕರ ಉಪಸ್ಥಿತಿಯಲ್ಲಿ ಸಂಮಾನಿಸಲಾಯಿತು.
ಸುರತ್ಕಲ್‌ನಲ್ಲಿ ಪಟ್ಲ ಫೌಂಡೇಶನ್ ಘಟಕದ ಪಂಚಮ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಮಾರ್ಚ್ 15ರಂದು ಶನಿವಾರ ಸಂಜೆ 6.30 ಗಂಟೆಗೆ ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಲಿದೆ.
ಯುವಜನೋತ್ಸವ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಪಟ್ಲ ಸತೀಶ್ ಶೆಟ್ಟಿ
ಮಂಗಳೂರು ಕೆನರಾ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದರು.
Yakshagana gains popularity in Europe; 16 artistes to perform in Belgium
: For the first time, a 16-member team from the Yakshadhruva Patla Foundation, Europe Unit, will perform the Yakshagana prasanga ‘Krishnaleela Kamsavadhe’ in Belgium on April 6.
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಕಲಾಪೋಷಕ ಪ್ರಶಸ್ತಿ
ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ರಿ. ಇದರ 90ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ 9ನೇ ದಿನದ ಕಾರ್ಯಕ್ರಮ ಇಂದು ಹೊನ್ನಾವರ ಬಳಿಯ ಗುಣವಂತೆ ಇಲ್ಲಿ ನಡೆಯಿತು.
ಯಕ್ಷಗಾನ ಕಲಾವಿದರಿಗೆ ಗೌರವಾರ್ಪಣೆ
ಯಕ್ಷಮಿತ್ರರು ಅಸೈಗೋಳಿ ಇದರ ವತಿಯಿಂದ ಅಸೈಗೋಳಿಯಲ್ಲಿ ಸೋಮವಾರ ನಡೆದ ಪಾವಂಜೆ ಮೇಳದ ಐದನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಕಲಾವಿದರಾದ ಪಟ್ಲ ಸತೀಶ್ ಶೆಟ್ಟಿ ದಿವಾಣ ಶಿವಶಂಕರಭಟ್, ಸುಭ್ರಾಯ ಹೊಳ್ಳ ಕಾಸರಗೋಡು, ಮಾಧವ ಬಂಗೇರ ಕೊಳತ್ತಮಜಲು, ರಘು ಶೆಟ್ಟಿ ನಾಳ ಹಾಗೂ ಅಸೈಗೋಳಿಯ ಉದಯ ಭಟ್ ಅವರನ್ನು ಗೌರವಿಸಿ ಸಮ್ಮಾನಿಸಲಾಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್: ಕಲಾವಿದನಿಗೆ ಧನಸಹಾಯ
ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದರಾದ ಶ್ರೀ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಇಂದು ಭೇಟಿ ನೀಡಿ ಆರೋಗ್ಯಕ್ಷೇಮ ವಿಚಾರಿಸಿ ಫೌಂಡೇಶನ್ ನ ವತಿಯಿಂದ ಧನಸಹಾಯ ನೀಡಿದರು.
ಪಟ್ಲ ಫೌಂಡೇಶನ್: ನವೀನ್ ಕುತ್ತಾರು ನೇತೃತ್ವದಲ್ಲಿ ಹತ್ತು ಸಮಸ್ತರಿಂದ 25,000/- ಮೊತ್ತದ ಚೆಕ್ ಹಸ್ತಾಂತರ
ನವೀನ್ ಕುತ್ತಾರು ಇವರ ನೇತೃತ್ವದಲ್ಲಿ ಹತ್ತು ಸಮಸ್ತರ ವತಿಯಿಂದ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಮುಖಾಂತರ 25,000/- ಮೊತ್ತದ ಚೆಕ್’ನ್ನು ಟ್ರಸ್ಟಿಗೆ ಹಸ್ತಾಂತರಿಸಿದರು.
‘ತ್ರಿಜನ್ಮ ಮೋಕ್ಷ’ ಯಕ್ಷಗಾನ ಬಯಲಾಟದಲ್ಲಿ ಪಟ್ಲ ಫೌಂಡೇಶನಿಗೆ ನೆನಪಿನ ಕಾಣಿಕೆ
ಜಪ್ಪು ಮಜಿಲ ಹತ್ತು ಸಮಸ್ತರ ವತಿಯಿಂದ ಮಂಗಳಾದೇವಿ ದೇವಸ್ಥಾನದ ಎದುರುಗಡೆ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಯವರಿಂದ ‘ತ್ರಿಜನ್ಮ ಮೋಕ್ಷ’ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ರೂ. ಒಂದು ಲಕ್ಷ ಮೊತ್ತದ ಚೆಕ್‌ನ್ನು ಹಾಗೂ 2 ಬೆಳ್ಳಿಯ ದೀಪವನ್ನು ಮೇಳದ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಇವರಿಗೆ ನೀಡಲಾಯಿತು.
ಪಟ್ಲ ಯಕ್ಷಾಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ರೂ. 25 ಲಕ್ಷ ಅನುದಾನ ವಿತರಣೆ
ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಾಶ್ರಯ ಯೋಜನೆಯಡಿ ಗೃಹ ನಿರ್ಮಾಣಕ್ಕಾಗಿ ವಿವಿಧ ಯಕ್ಷಗಾನ ಮೇಳಗಳ ಕಲಾವಿದರಿಗೆ ಹಾಗೂ ದೈವಾರಾದನೆಯ ಪರಿಚಾರಕರಿಗೆ ರೂ. 25 ಲಕ್ಷದ ಮೊತ್ತದ ಚೆಕ್ಕುಗಳನ್ನು ಇಂದು ಟ್ರಸ್ಟಿನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ ಇವರ ಕಚೇರಿಯಲ್ಲಿ 16 ಮಂದಿ ಫಲಾನುಭವಿಗಳಿಗೆ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಹಾಗೂ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ವಿತರಿಸಿದರು.
ಮಂಗಳೂರು ಮಹಾನಗರ ಪಾಲಿಕೆಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನಿಗೆ ರೂ. 10 ಲಕ್ಷ ಫ್ರೋತ್ಸಾಹಧನ ವಿತರಣೆ
ಮಂಗಳೂರು ಮಹಾಪಾಲಿಕೆಯ ವತಿಯಿಂದ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುವ ವಿಶೇಷ ಕಾರ್ಯಕ್ರಮದಡಿ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವನ್ನು ಸರಕಾರಿ ಶಾಲೆಗಳಲ್ಲಿ ಉಚಿತವಾಗಿ ಕಲಿಸುವ ನಿಟ್ಟಿನಲ್ಲಿ ಯಕ್ಷಗಾನ ತರಬೇತಿ ತರಗತಿಗಳನ್ನು ರಾಜ್ಯದ್ಯಂತ ನಡೆಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಗಾನಂ ವಿಶ್ವಗಾನಂ ಯೋಜನೆಯಡಿ 2024-25ನೇ ಸಾಲಿನ ಬಜೆಟಿನಲ್ಲಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಸ್ಟಾಯೀ ಸಮಿತಿ ಅಧ್ಯಕ್ಷ ವರುಣ್ ಚೌಟ ಇವರು ಘೋಷಿಸಿದ ರೂ. 10 ಲಕ್ಷ ಪ್ರೋತ್ಸಾಹಧನವನ್ನು ಮಾನ್ಯ ಮೇಯರ್ ಮನೋಜ್ ಕುಮಾರ್ ಇವರು ಪಟ್ಲ ಫೌಂಡೇಶನಿನ ಕೇಂದ್ರೀಯ ಸಮಿತಿಯ ಜತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ ಇವರ ಮೂಲಕ ಟ್ರಸ್ಟಿಗೆ ನೀಡಿದರು.
ಜಿ. ಕೆ ನಾವಡರಿಗೆ ತುರ್ತು ಆರ್ಥಿಕ ಸಹಾಯ ನೀಡಿದ ಪಟ್ಲ ಫೌಂಡೇಶನ್
ಯಕ್ಷಗಾನದ ಪ್ರಸಿದ್ದ ಹಿರಿಯ ಭಾಗವತ ಜಿ. ಕೆ ನಾವಡ ಬಾಯಾರು ಇವರ ಆರೋಗ್ಯ ತುಂಬಾ ಗಂಭೀರ ಸ್ಥಿತಿಯಲ್ಲಿದ್ದು ಅವರ ಧರ್ಮಪತ್ನಿ ಶ್ರೀದೇವಿ ಯವರು ಮತ್ತು ನಾವಡರ ಸ್ನೇಹಿತ ಕೀರ್ತಿ ಭಟ್ ರವರು ಇಂದು ಪಟ್ಲ ಸತೀಶ್ ಶೆಟ್ಟಿ ಯವರನ್ನು ಭೇಟಿಯಾಗಿ ತುರ್ತು ಆರ್ಥಿಕ ಸಹಾಯಕ್ಕಾಗಿ ಯಕ್ಷದ್ರುವ ಪಟ್ಲ ಫೌಂಡೇಶನ್ ಗೆ ಮನವಿ ಸಲ್ಲಿಸಿದರು.
ಉಡುಪಿಯ ಪಲಿಮಾರು ಮಠದ ಪೂಜ್ಯ ಸ್ವಾಮೀಜಿಯವರೊಂದಿಗೆ ಪ್ರಯಾಗ್ ರಾಜ್ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ
ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಕೇಂದ್ರೀಯ ಸಮಿತಿಯ ತಂಡವನ್ನು ಪೂಜ್ಯ ಸ್ವಾಮೀಜಿಯವರ ಶಿಷ್ಯ ವೃಂದದವರು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಊಟ ಫಲಹಾರಗಳನ್ನು ನೀಡಿ ಸತ್ಕರಿಸಿದರು. ಹಾಗೂ ಬ್ರಾಹ್ಮೀ ಮುಹೂರ್ತದಲ್ಲಿ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ ನೇತೃತ್ವದಲ್ಲಿ ನೆರವೇರಿತು.
ಪೊಳಲಿ ಘಟಕದ 5ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಪೊಳಲಿ ಘಟಕದ 5ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷ ಪಯಣದ ರಜತ ಸಂಭ್ರಮದಲ್ಲಿರುವ ಪಾವಂಜೆ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾದ ಉದ್ಯಮಿಯಿಂದ 1.25 ಕೋಟಿ ದೇಣಿಗೆ
ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶ್ರೀ ಶಾರದಾ ಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಅವರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ಶುಭದಿನವೇ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು ಲಕ್ಷ ಮೊತ್ತದ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.
ಕತೆ ಕೈಲಾಸ ಸಿನಿಮಾಕ್ಕೆ ಮುಹೂರ್ತ
ಲಕುಮಿ ಸಿನಿ ಕ್ರಿಯೇಷನ್ ವತಿಯಿಂದ ಶ್ರೀ ಕದಳಿ ಸಿನಿ ಪ್ರೊಡಕ್ಷನ್ ಇವರ ಸೂರಜ್ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ‘ಕತೆ ಕೈಲಾಸ’ ಕನ್ನಡ, ತುಳು ಸಿನಿಮಾದ ಮುಹೂರ್ತ ಸಮಾರಂಭ ಕದ್ರಿ ದೇವಸ್ಥಾನದಲ್ಲಿ ಜರುಗಿತು.
ಪೆರುವಾಜೆ : ಬಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನ
ಪೆರುವಾಜೆ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಪ್ರಯುಕ್ತ ಶನಿವಾರ ರಾತ್ರಿ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶನಿವಾರ ರಾತ್ರಿ ಬಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತ್ತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಉಪ್ಪಳ ಘಟಕದ 7ನೇ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಉಪ್ಪಳ ಘಟಕದ 7ನೇ ವಾರ್ಷಿಕೋತ್ಸವವು ಶ್ರೀಹರಿ ಭಜನಾ ಮಂದಿರ ಕುಳೂರು ಇಲ್ಲಿ ಉಪ್ಪಳ ಘಟಕದ ಗೌರವಾಧ್ಯಕ್ಷರಾದ ಶ್ರೀ ಪಿ. ಆರ್. ಶೆಟ್ಟಿ ಪೊಯ್ಯೇಲು ಕುಳೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಯಕ್ಷಧ್ರುವ ಯುವ ಯಕ್ಷಗಾನ ಸ್ಪರ್ಧೆಗೆ ಆಹ್ವಾನ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಯಕ್ಷಧ್ರುವ ಯುವ ಯಕ್ಷಗಾನ ಸರ್ಧೆಯು 2025ರ ಎಪ್ರಿಲ್ ತಿಂಗಳಾಂತ್ಯದಲ್ಲಿ ನಡೆಯಲಿದೆ. ಇದು ತೆಂಕು ಬಡಗುತಿಟ್ಟುವಿನ ಯುವ ಯಕ್ಷಗಾನ ಕಲಾವಿದರ ಬಯಲಾಟ ಸ್ಪರ್ಧೆಯಾಗಿದ್ದು, ಪ್ರಸಕ್ತ ಸ್ಪರ್ಧೆಯಲ್ಲಿ ಮೇಳದಲ್ಲಿ ತಿರುಗಾಟ ಮಾಡಿದ, ತಿರುಗಾಟ ಮಾಡುತ್ತಿರುವ ಕಲಾವಿದರು ಭಾಗವಹಿಸಬಹುದಾಗಿದೆ.
ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ-25
ಒಡ್ಡೂರು ಫಾರ್ಮ್ಸ್ ಗಂಜಿಮಠದಲ್ಲಿ ನಡೆಯುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು,ಯಕ್ಷಧ್ರುವ – ಯಕ್ಷಶಿಕ್ಷಣ,ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2024-25
ಯಕ್ಷಶಿಕ್ಷಣದ 1000 ವಿದ್ಯಾರ್ಥಿಗಳ ರಂಗಪ್ರವೇಶ
ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ ಹೌಸ್‌ನ ಮೈದಾನದಲ್ಲಿ ಹಾಕಲಾದ ಎರಡು ವೇದಿಕೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನದ ಬೆಂಡೆ, ಮದ್ದಳೆ, ಹಿಮ್ಮೇಳದ ಅಬ್ಬರಕ್ಕೆ ವಿವಿಧ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಧಿಗಿಣ, ನಾಟ್ಯ, ಕುಣಿತದ ಮೂಲಕ ಗಮನಸೆಳೆದರು.
ಕೇಪು: ಯಕ್ಷ ಶಿಕ್ಷಣ ವಿದ್ಯಾರ್ಥಿಗಳ ರಂಗ ಪ್ರವೇಶ ಹಾಗೂ ಯಕ್ಷಗಾನ ಪ್ರದರ್ಶನ
ದಿನಾಂಕ 6.01.2025ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಯಕ್ಷಧ‍್ರುವ ಪಟ್ಲಾ ಫೌಂಡೇಶನ್ ರಿ.ಮಂಗಳೂರು ವಿಟ್ಲ ಘಟಕದ ಸಹಯೋಗದಲ್ಲಿ ಉಚಿತ ಯಕ್ಷ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ರಂಗ ಪ್ರವೇಶ ಹಾಗೂ ಮಕ್ಕಳ ಯಕ್ಷಗಾನ ಪ್ರದರ್ಶನ ಯಕ್ಷ ಗುರುಗಳಾದ ಗಣೇಶ ಆಚಾರ್ಯರವರ ನಿರ್ದೇಶನದಲ್ಲಿ ಅತ್ಯುತ್ತಮವಾಗಿ ಮೂಡಿಬಂದಿತು.
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷಗಾನ ತಾಳಮದ್ದಳೆ
ಯಮುನ ಸಿಟಿ ಕ್ಲಬ್ ಹೌಸ್ ಕುಳಾಯಲ್ಲಿ ವಿದ್ಯಾ ಹರ್ಬ್ಸ್ ಬೆಂಗಳೂರು ಆಡಳಿತ ವರ್ಗದ ಗೌರವಾರ್ಥ ನಡೆದ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ದಾಮೋದರ ರೈ (ಆದಿ...
2025 ಜೂನ್ 1ರಂದು ಯಕ್ಷಧ್ರುವ ಪಟ್ಲ ದಶಮಾನೋತ್ಸವ ಸಂಭ್ರಮ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ 10ನೇ ವರ್ಷದ ಪಟ್ಲ ಸಂಭ್ರಮ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರಗಿಸುವ ಕುರಿತಾಗಿ ಫೌಂಡೇಶನಿನ ಮಹಾದಾನಿಗಳ, ಮಹಾಪೋಷಕರ , ಟ್ರಸ್ಟಿಗಳ, ವಿವಿಧ ಪ್ರಾದೇಶಿಕ ಘಟಕಗಳ ಪದಾಧಿಕಾರಿಗಳ ಹಾಗೂ ಪಟ್ಲ ಅಭಿಮಾನಿಗಳ ಸಮಲೋಚನಾ ಸಭೆಯು ನಗರದ ಪ್ರತಿಷ್ಠಿತ ಗೋಲ್ಡ್ ಪಿಂಚ್ ಹೋಟೆಲ್ ಸಭಾಂಗಣದಲ್ಲಿ ಜರಗಿತು.
ಪಟ್ಲರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ: ಪ್ರಕಾಶ್ ಶೆಟ್ಟಿ
ಯಕ್ಷಧ್ರುವ ಪಟ್ಲವಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು. ಎಂ.ಆರ್.ಜಿ. ಗ್ರೂಫ್ ಚೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ ಕಂಪನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿಯವರದ್ದಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವವು ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟರಿಗೆ ಪ್ರಶಸ್ತಿ ಪ್ರದಾನ
ಯಕ್ಷಗಾನಕ್ಕೆ ಹೊಸ ಆಯಾಮ ಕೊಟ್ಟವರು ಪಟ್ಲ ಸತೀಶ್ ಶೆಟ್ಟಿಯಾದರೆ ಅದಕ್ಕೆ ಶಶಿಯಾಗಿ ಬೆಳಕು ಕೊಟ್ಟವರು ಶಶಿಧರ್ ಶೆಟ್ಟಿ ಅವರು. ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ಮನಸ್ಸು ಕರಾವಳಿಯಲ್ಲಿದೆ. ಅದರಲ್ಲಿ ಶಶಿಧರ್ ಶೆಟ್ಟಿ ಅವರಿಗೆ ಅವರ ತಾಯಿ ಕಾಶಿ ಶೆಟ್ಟಿ ಅವರ ಆಶೀರ್ವಾದದಿಂದ ಬಂದಿದೆ ಎಂದು ಹರೀಶ್ ಪೂಂಜ ಅಭಿಪ್ರಾಯಪಟ್ಟರು.
ಜಾತಿ, ಧರ್ಮ ಒಗ್ಗೂಡಿಸುವ ಕಾರ್ಯ: ಪೂಂಜ
ಯಕ್ಷಗಾನಕ್ಕೆ ಹೊಸ ಕಲ್ಪನೆ ಕೊಟ್ಟವರು ಪಟ್ಲ ಸತೀಶ್ ಶೆಟ್ಟಿಯಾದರೆ ಅದಕ್ಕೆ ಶಶಿಯಾಗಿ ಬೆಳಕು ಕೊಟ್ಟವರು ಶಶಿಧರ ಶೆಟ್ಟಿ ಅವರು. ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ಮನಸ್ಸು ಕರಾವಳಿಯಲ್ಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಪ್ರತಿಭಾ ಕಾರಂಜಿಯಲ್ಲಿ ಯಕ್ಷಗಾನವೂ ಸೇರಲಿ
ಗುಣಾತ್ಮಕ ಶಿಕ್ಷಣಕ್ಕೆ ಯಕ್ಷಗಾನ ಪೂರಕ ಕಲೆ. ಪ್ರತಿವರ್ಷ ಶಿಕ್ಷಣ ಇಲಾಖೆಯಿಂದ ಪ್ರತಿಭಾ ಕಾರಂಜಿ ನಡೆಸಲಾಗುತ್ತಿದೆ. ಆದರೆ ಈವರೆಗೆ ಯಕ್ಷಗಾನ ಸೇರ್ಪಡೆಯಾಗಿರಲಿಲ್ಲ. ಮುಂದೆ ಪ್ರತಿಭಾ ಕಾರಂಜಿಯಲ್ಲೂ ಯಕ್ಷಗಾನ ಸೇರ್ಪಡೆಗೊಳಿಸುವಂತೆ ಇಲಾಖೆಗೆ ನಾನು ಮನವಿ ಮಾಡುತ್ತೇನೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಹೇಳಿದರು.
ಯಕ್ಷಗಾನ ಕಲೆಗೆ ಹೊಸ ರೂಪ ಕೊಟ್ಟ ಯಕ್ಷಧ್ರುವ
ಯಕ್ಷಗಾನ ಶ್ರೀಮಂತ ಕಲೆಯಾಗಿದೆ. ಕಲೆಗೆ, ಕಲಾವಿದರ ಬದುಕಿಗೆ ಹೊಸ ರೂಪ ಕೊಟ್ಟವರು ಸತೀಶ್ ಶೆಟ್ಟಿ ಪಟ್ಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಗೆ ಶಕ್ತಿಯಾಗಿ ನಿಂತ ಉದ್ಯಮಿ ಶಶಿಧರ ಶೆಟ್ಟಿಯವರು ತಾಲೂಕಿನಲ್ಲಿ ಯಕ್ಷ ಸಂಭ್ರಮ ನಡೆಸಿ ಕಲೆಯನ್ನು ಶ್ರೀಮಂತಗೊಳಿಸುತ್ತಿದ್ದಾರೆ.
ಡಿ. 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ
ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ “ಯಕ್ಷ ಸಂಭ್ರಮ” ಅದ್ದೂರಿಯಾಗಿ ನಡೆಯಲಿದೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು.
ಬೆಳ್ತಂಗಡಿ ಘಟಕ ಯಕ್ಷ ಸಂಭ್ರಮ: ಉಜಿರೆಯಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಅದ್ದೂರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಬಿಡುಗಡೆಗೊಳಿಸಿದರು.
ಅನಾರೋಗ್ಯದಿಂದ ಸಂಕಷ್ಟದಲ್ಲಿರುವ ವಿದ್ವಾಂಸ ಶ್ರೀ ಗಣೇಶ್ ಕೊಲೆಕಾಡಿಗೆ ನೆರವಾಗಲು ಪಟ್ಲ ಸತೀಶ್ ಶೆಟ್ಟಿ ಮನವಿ
ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಶ್ರೀ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ದಿನಾಂಕ 3-12-2024 ಮಂಗಳವಾರ ಸಂಜೆ ಶ್ರೀಯುತರ ಮನೆಗೆ ಭೇಟಿ ನೀಡಿದರು.
ಬಹರೈನ್‌ನಲ್ಲಿ ಪಟ್ಲ ಫೌಂಡೇಶನ್ 4ನೇ ವಾರ್ಷಿಕೋತ್ಸವ
ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಹರೈನ್ ಮತ್ತು ಸೌದಿ ಘಟಕದ ನಾಲ್ಕನೇ ವಾರ್ಷಿಕೋತ್ಸವ ಸಂಭ್ರಮ ನವೆಂಬರ್ 1ರಂದು ಬಹರೈನ್ ಮನಾಮದ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಬಹಳ ಅದ್ಧೂರಿಯಾಗಿ ನಡೆಯಿತು.
ಓಂ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಂಟ್ವಾಳ ಜಯರಾಮ ಆಚಾರ್ಯರ ಸಂಸ್ಮರಣೆ
ಓಂ ಫ್ರೆಂಡ್ಸ್ ಕ್ಲಬ್ (ರಿ) ಕಳ್ಳಿಗೆ- ಪಚ್ಚಿನಡ್ಕ ಇದರ ರಜತ ಸಂಭ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಖ್ಯಾತ ಹಾಸ್ಯಗಾರರು ಬಂಟ್ವಾಳ ಜಯರಾಮ ಆಚಾರ್ಯ ಇವರ ಸಂಸ್ಮರಣೆ ಮತ್ತು ಧನಸಹಾಯ ಮಾಡಲಾಯಿತು.
ನಾಗತೀರ್ಥ ಚಿಟ್ಸ್ ತೀರ್ಥಹಳ್ಳಿ: ಪಟ್ಲ ಸತೀಶ್ ಶೆಟ್ಟಿಯವರಿಗೆ ವಿಶೇಷ ಗೌರವ
ನಾಗತೀರ್ಥ ಚಿಟ್ಸ್ ತೀರ್ಥಹಳ್ಳಿ ಇದರ ಪ್ರಧಾನ ಕಚೇರಿಯಲ್ಲಿ ತೀರ್ಥಹಳ್ಳಿಯ ಗಣ್ಯರ ಸಮ್ಮುಖದಲ್ಲಿ ಪಟ್ಲ ಸತೀಶ್ ಶೆಟ್ಟಿಯವರಿಗೆ ವಿಶೇಷ ಗೌರವ ಅಭಿವಂದನೆ ಸಲ್ಲಿಸಲಾಯಿತು.
ಸಿಹಿಮೊಗೆ ಸಂಭ್ರಮ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಗೆ ಸನ್ಮಾನ
ಅನವರತ – ಸಿರಿಮೊಗೆ 01 ಕಾರ್ಯಕ್ರಮ ನಿಮಿತ್ತ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆದ ಮೇಳದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಶಿವಮೊಗ್ಗದ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಇವರು ಗೌರವಿಸಿದರು.
ಯಕ್ಷಶಿಕ್ಷಣ ವಿದ್ಯಾರ್ಥಿಗಳ ಜೊತೆ ಪಟ್ಲ ಸತೀಶ್ ಶೆಟ್ಟಿ ಸಂವಾದ
ಶಿವಮೊಗ್ಗ ಜಿಲ್ಲೆಯ ಹೆಬ್ಬಯಿಲು ಗ್ರಾಮದ ಸರಕಾರಿ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತವಾಗಿ ನಡೆಯುತ್ತಿರುವ ಯಕ್ಷಧ್ರುವ ಯಕ್ಷಶಿಕ್ಷಣದ ವಿದ್ಯಾರ್ಥಿಗಳ ಜೊತೆ ಪಟ್ಲ ಸತೀಶ್ ಶೆಟ್ಟಿಯವರು ಸಂವಾದ ನಡೆಸಿ ನಾಟ್ಯಭ್ಯಾಸವನ್ನು ಕಣ್ಣುತುಂಬಿಸಿಕೊಂಡರು.
ಶಿವಮೊಗ್ಗ: ಉಚಿತ ಯಕ್ಷಗಾನ ತರಗತಿಯ ಉದ್ಘಾಟನೆ
ಸರ್ಕಾರಿ ಪ್ರೌಢಶಾಲೆ ನಗರ ಮತ್ತು ಪ್ರಜ್ಞಾಭಾರತಿ ವಿದ್ಯಾಕೇಂದ್ರ ನಿಟ್ಟೂರು ಶಾಲೆಯಲ್ಲಿ ಉಚಿತ ಯಕ್ಷಗಾನ ತರಗತಿಯು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು.
ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭ
ಯಕ್ಷಧ್ರುವ ಪಟ್ಲ ಸತೀಶ್ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭವು 21-11-2024ರಂದು ನೂತನವಾಗಿ ಉದ್ಘಾಟನೆಗೊಂಡ ಶೇಡಿಕೊಡ್ಲು ಮಂದಾರ್ತಿ ದುರ್ಗಾ ಗಾರ್ಡನ್ ಆವರಣದಲ್ಲಿ ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ ಕೊಕ್ಜರ್ಣೆ ಇವರ ಸಭಾಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಿತು. ದಿ| ಚಂದ್ರ ನಾಯ್ಕರ ಧರ್ಮಪತ್ನಿ ಶ್ರೀಮತಿ ವಾಣಿ ಇವರಿಗೆ ನೀಲಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೂ. 25 ಸಾವಿರ ಆಸರೆಯ ಪ್ರೋತ್ಸಾಹಧನ, ಹಿರಿಯ ಕಲಾವಿದ ಅಜ್ರಿ ಗೋಪಾಲ ಗಾಣಿಗ ಇವರಿಗೆ ಮನೆ ನಿರ್ಮಾಣ ಸಹಾಯಾರ್ಥವಾಗಿ ರೂ. 5 ಲಕ್ಷದ ಮೊತ್ತವನ್ನು ನೀಡಲಾಯಿತು.
ಕಾರ್ಕಳ ಘಟಕದ ಒಂಬತ್ತನೇ ‘ಪಟ್ಲ ಸಂಭ್ರಮೋತ್ಸವ’
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ “ಪಟ್ಲ ಸಂಭ್ರಮೋತ್ಸವ” ಹಾಗೂ ಯಕ್ಷಕಲಾರಂಗ (ರಿ) ಕಾರ್ಕಳ ಇದರ 12ನೇ ವಾರ್ಷಿಕೋತ್ಸವವು ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳ ಮಾರಿಗುಡಿ ವಠಾರದಲ್ಲಿ ನಡೆಯಿತು. ಗೋವಾ ಘಟಕದ ಅಧ್ಯಕ್ಷರಾದ ಉದ್ಯಮಿ ಗಣೇಶ್ ಶೆಟ್ಟಿ, ರಶ್ಮಿ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ಅಧ್ಯಕ್ಷರಾದ ಡಿ. ಆರ್.ರಾಜು ಇವರ ಗೌರವ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯು ಮಂಗಳೂರಿನ ಕದ್ರಿಯಲ್ಲಿ ದಿನಾಂಕ: 17/11/2024ರ ರವಿವಾರ ನಡೆಯಿತು.
ಕನ್ಯಾನ ಸದಾಶಿವ ಶೆಟ್ಟರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ ಸಮ್ಮಾನ
ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಕೆ. ಶೆಟ್ಟಿ ಅವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಗೌರವ ಅಭಿನಂದನೆ ಸಲ್ಲಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಅವರು, ಸಮಾಜ ಸೇವೆ ಮಾಡಲು ನನಗೆ ಭಗವಂತ ನೀಡಿರುವ ಆಶೀರ್ವಾದವಾಗಿದ್ದು, ನನ್ನ ಬದುಕಿನ ಸುಯೋಗವಾಗಿದೆ. ಬಡ ಜನತೆಯ ಸೇವೆ ನನಗೆ ತೃಪ್ತಿ ನೀಡಿದೆ. ಸಮಾಜದ ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ ಸಾಧ್ಯವಾಗಿದೆ ಎಂದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಉಡುಪಿ ಘಟಕದ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ನಿರುಪಮಾ ಪ್ರಸಾದ್ ಆಯ್ಕೆ
ಪಾವಂಜೆ ಮೇಳದ ಪಂಚಮ ವರ್ಷದ ಯಾನದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕೇಂದ್ರೀಯ ಸಮಿತಿ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ದೇಶ ವಿದೇಶಗಳಲ್ಲಿ 41 ಘಟಕಗಳನ್ನು ಹೊಂದಿದ್ದು, ಇದೀಗ ಉಡುಪಿ ಮಹಿಳಾ ವಿಭಾಗದ ಉದ್ಘಾಟನೆ ನ. 14ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.
ಪಾವಂಜೆ ಮೇಳ: 5ನೇ ವರ್ಷದ ತಿರುಗಾಟ ಆರಂಭ
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇದರ ಯಕ್ಷಗಾನ ಮೇಳದ 5ನೇ ವರ್ಷದ ತಿರುಗಾಟವು 4 ಬುಧವಾರ ಕ್ಷೇತ್ರದಲ್ಲಿ ಕಲಾವಿದರಿಗೆ ಗೆಜ್ಜೆ ಪ್ರದಾನ ಕಾರ್ಯಕ್ರಮ ದೊಂದಿಗೆ ಆರಂಭಗೊಂಡಿತು.
ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಬೆಂಗಳೂರಿನಲ್ಲಿ ಒಂದೇ ದಿನ ಎರಡು ಕಾರ್ಯಕ್ರಮಗಳು ಸಂಪನ್ನ
ಕ್ಷಿಪ್ರ ಅವಧಿಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಬೆಂಗಳೂರು ಮಹಾನಗರದಲ್ಲಿ ಒಂದೇ ದಿನ ಎರಡು ಕಾರ್ಯಕ್ರಮಗಳು ಸಂಪನ್ನವಾದವು.
ಕಾರ್ಕಳ: 9ನೇ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ರಿ. ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ ಪಟ್ಲ ಸಂಭ್ರಮವು ಇದೇ ನವೆಂಬರ್ 16 ನೇ ಶನಿವಾರ ಕಾರ್ಕಳ ಮಾರಿಗುಡಿಯ ವಠಾರದಲ್ಲಿ ನಡೆಯಲಿದ್ದು, ಇಂದು ಆಮಂತ್ರಣ ಪತ್ರಿಕೆ ಮಾರಿಯಮ್ಮನ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು.
ರಂಗ ಶಂಕರ ಆಡಿಟೋರಿಯಂನಲ್ಲಿ ಅಪಾರ ಮೆಚ್ಚುಗೆ ಗಳಿಸಿದ ಪಾವಂಜೆ ಮೇಳದ ಯಕ್ಷಗಾನ ಪ್ರದರ್ಶನ
ಪಟ್ಲ ಸತೀಶ್ ಶೆಟ್ಟಿ ನೇತ್ರತ್ವದಲ್ಲಿ ರಂಗಭೂಮಿ ಹಾಗೂ ಚಲನಚಿತ್ರದಲ್ಲಿ ಮಿಂಚಿದ ಮೇರುನಟ ದಿ| ಶಂಕರ್ ನಾಗ್ ಇವರ ಧರ್ಮಪತ್ನಿ ಅರುಂಧತಿ ನಾಗ್ ಅವರ ಪರಿಕಲ್ಪನೆಯ ರಂಗ ಶಂಕರ ಆಡಿಟೋರಿಯಂನಲ್ಲಿ ಪಾವಂಜೆ ಮೇಳದ ಯಕ್ಷಗಾನ ಪ್ರದರ್ಶನ ಪ್ರಬುದ್ಧ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿತು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕೊಡುಗೈ ದಾನಿಗಳೂ, ಶ್ರೇಷ್ಠ ಉದ್ಯಮಿಯಾಗಿ ಸಹಸ್ರಾರು ಕುಟುಂಬಗಳಿಗೆ ಉದ್ಯೋಗದಾತರಾಗಿ, ಅನ್ನದಾತರಾಗಿ ತುಳುನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಭೂಪಟದಲ್ಲಿ ಮಿನುಗಿಸಿದ, ಮಾರ್ಗದರ್ಶಕರಾದ ಮಂಗಳೂರು ಕನ್ಯಾನ ಸದಾಶಿವ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.
ತ್ರಿರಂಗ ಸಂಗಮ ಮುಂಬಯಿ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಗೌರವ
ಯಕ್ಷಗಾನ ಪ್ರದರ್ಶನ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಮುಂಬಯಿ ಯಾನ 2024ರ ಸಮಾರೋಪ ಸಮಾರಂಭ, ಶ್ರೀ ದೇವಿ ಮಹಾತ್ಮೆ ಪ್ರಸಂಗದ ಪ್ರದರ್ಶನ ನಡೆಯಿತು.
ಪಟ್ಲ ಫೌಂಡೇಶನ್ ಕಿನ್ನಿಗೋಳಿ ಘಟಕ ಸ್ಥಾಪನೆ: ಪೂರ್ವಭಾವಿ ಸಭೆ
ಪಟ್ಲ ಫೌಂಡೇಶನ್ ಮೂಲಕವಾಗಿ ಬಡ ಆಶಕ್ತ ಕಲಾವಿದರ ಕಣ್ಣೀರು ಒರೆಸುವ, ಕಷ್ಟ ಕಾಲಕ್ಕೆ ಸಹಾಯ ಹಸ್ತ ನೀಡುವ ಕೆಲಸ ಟ್ರಸ್ಟ್ ಮೂಲಕ ನಡೆದಿದೆ. ಮುಂದಕ್ಕೂ ಕಿನ್ನಿಗೋಳಿಯಲ್ಲಿ ಪಟ್ಲ ಫೌಂಡೇಶನ್ ಘಟಕ ಪ್ರಾರಂಭವಾಗಲಿದೆ ಎಂದು ಕಟೀಲು ಎಕ್ಕಾರು ಘಟಕದ ಅಧ್ಯಕ್ಷ ಗೀರೀಶ್ ಶೆಟ್ಟಿ ಕಟೀಲು ಹೇಳಿದರು.
ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈ ಹಸ್ತಾಂತರ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಅವರ ಕನಸಿನ ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈಯನ್ನು ಫಲಾನುಭವಿಗಳಾದ ಶ್ರೀ ಧರ್ಮಸ್ಥಳದ ಮೇಳದ ಚೆಂಡೆ ವಾದಕರಾದ ಶ್ರೀ ಚಂದ್ರಶೇಖರವರಿಗೆ ಹಸ್ತಾಂತರಿಸಲಾಯಿತು.
‘ಆಯೋಧ್ಯಾ ದೀಪ’ ಯಕ್ಷಗಾನ ಪ್ರದರ್ಶನ; ಪಟ್ಲ ಸತೀಶ್ ಶೆಟ್ಟಿಯವರಿಗೆ ಸನ್ಮಾನ
ನಮ್ಮ ಮಕ್ಕಳಿಗೆ ಆಸ್ತಿ ಮಾಡಿಡುವ ಬದಲು ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ನೀಡಿ ಮಕ್ಕಳನ್ನೇ ಆಸ್ತಿಯನ್ನಾಗಿರಿಸಿಕೊಂಡು ಬೆಳೆಸುವಂತರಾಗಬೇಕು, ಕೇವಲ ಶ್ರೀಮಂತರಾಗಿದ್ದರೆ ಸಾಲದು. ಹೃದಯ ಶ್ರೀಮಂತಿಕೆ ನಮ್ಮಲ್ಲಿರಬೇಕು.
ಯಕ್ಷಾಶ್ರಯ ಫಲಾನುಭವಿಗಳಿಗೆ ಗೃಹನಿರ್ಮಾಣ ಮೊತ್ತದ ವಿತರಣೆ
ಪಟ್ಲ ಯಕ್ಷಾಶ್ರಯ ಯೋಜನೆಯ ಅಡಿಯಲ್ಲಿ ಆಯ್ಕೆ ಮಾಡಿದ ಯಕ್ಷಗಾನ ಕಲಾವಿದರು ಹಾಗೂ ದೈವಾರಾಧನೆ ಕ್ಷೇತ್ರದ ದೈವ ನರ್ತಕರು ಈಗಾಗಲೇ ಗೃಹನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದಾರೆ. ಈ ನಿರ್ಮಾಣಕ್ಕಾಗಿ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು, ಕೊಡುಗೈ ದಾನಿಗಳು ನೀಡಿದ ಸುಮಾರು 15 ಲಕ್ಷ ಮೊತ್ತವನ್ನು ಫಲಾನುಭವಿಗಳಿಗೆ ದಿನಾಂಕ 21-10-2024 ಸೋಮವಾರ ಸಂಜೆ ಫೌಂಡೇಶನ್ ನ ಆಫೀಸಿನಲ್ಲಿ ವಿತರಿಸಿದರು.
ತ್ರಿರಂಗ ಸಂಗಮ ಮುಂಬಯಿ ಇದರ ಸಂಯೋಜನೆಯಲ್ಲಿ ಪಾವಂಜೆ ಮೇಳ
ತ್ರಿರಂಗ ಸಂಗಮ ಮುಂಬಯಿ ಇದರ ಸಂಯೋಜನೆಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಇವರ ಸಾರಥ್ಯದಲ್ಲಿ ನಡೆಯುತ್ತಿರುವ ಪಾವಂಜೆ ಮೇಳದ 2024ರ ಮುಂಬಯಿ ಯಾನದ ಎರಡನೇ ದಿನದ ಕಾರ್ಯಕ್ರಮವು ಅಂಧೇರಿ ಪೂರ್ವದ ಶ್ರೀ ದತ್ತ ಜಗದಂಬಾ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆಯಿತು.
ಗೋವಾದಲ್ಲಿಯು ಯಕ್ಷಗಾನ ಕಲೆ ಬೆಳೆಸಿದ ರೀತಿ ಹೆಮ್ಮೆ ಪಡವಂತದ್ದು- ಸತೀಶ್ ಪಟ್ಲ
ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕಲೆ ಬೆಳೆದ ರೀತಿ, ಗೋವಾದಲ್ಲಿ ನೀವೆಲ್ಲರೂ ಸೇರಿ ಕಲೆ ಬೆಳೆಸಿದ ವಿಷಯ ತಿಳಿದು ನನಗೆ ಹೆಮ್ಮೆ ಅನಿಸುತ್ತದೆ. ಯಕ್ಷಗಾನ ಆರಾಧನಾ ಕಲೆ, ಸಂಸ್ಕೃತಿ, ಸಂದೇಶ ಸಾರುವ ಕಲೆ ಎಂದು ಪಟ್ಲ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಶ್ರೇಷ್ಠ ಭಾಗವತರಾದ ಸತೀಶ್ ಶೆಟ್ಟಿ ಪಟ್ಲ ನುಡಿದರು.
ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ
ಯಕ್ಷಧ್ರುವ ಖ್ಯಾತಿಯ ಪಟ್ಲ ಸತೀಶ್ ಶೆಟ್ಟಿ ಅಧ್ಯಕ್ಷತೆಯ ಯಕ್ಷಧ್ರುವ ಸೌಹಾರ್ದ ಕೋಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಇತ್ತೀಚೆಗೆ ಕಾವೂರಿನಲ್ಲಿ ನಡೆಯಿತು.
ಪೌರಾಣಿಕ ನಾಟಕಗಳಿಂದ ಪ್ರೇಕ್ಷಕರಿಗೆ ಭಕ್ತಿಯ ಸಂದೇಶ: ಪಟ್ಲ ಸತೀಶ್ ಶೆಟ್ಟಿ
ಶ್ರೀ ಲಲಿತೆ ಕಲಾವಿದರು (ರಿ) ಮಂಗಳೂರು ಇವರ ನೂತನ ಕಲಾಕೃತಿ ಕದ್ರಿ ನವನೀತ ಶೆಟ್ಟಿಯವರು ರಚಿಸಿರುವ ಜೀವನ್ ಉಳ್ಳಾಲ್ ನಿರ್ದೇಶನ, ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಶನಿ ಮಹಾತ್ಮೆ ತುಳು ಕನ್ನಡ ಪೌರಾಣಿಕ ನಾಟಕದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕದ್ರಿ ಮಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ e.V. ಉದ್ಘಾಟನೆ
ಅಕ್ಟೊಬರ್ 3. ಜರ್ಮನಿಯು ಏಕೀಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್ ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಇದರ ಯುರೋಪ್ ಘಟಕ ಸ್ಥಾಪಿಸಿ ಔಪಚಾರಿಕವಾಗಿ ಘೋಷಣೆ ಮಾಡುವ ದಿನ.
ಯೂರೋಪ್ ರಾಷ್ಟ್ರಗಳಿಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿದ ಪಟ್ಲ ಫೌಂಡೇಶನ್ – ಅಕ್ಟೋಬರ್ 3ರಂದು ಜರ್ಮನಿಯಲ್ಲಿ ಉದ್ಘಾಟನೆ
ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದ ಉದ್ಘಾಟನಾ ಸಮಾರಂಭ ಅಕ್ಟೋಬರ್ 3ರಂದು ಜರ್ಮನಿಯಲ್ಲಿ ನೆರವೇರಲಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ ಗೌರವ
ಯಕ್ಷಧ್ರುವ ಸೌಹಾರ್ದ ಕೋ-ಅಪರೇಟಿವ್ ಸೊಸೈಟಿ ಲಿ. ಇದರ ದ್ವಿತೀಯ ವಾರ್ಷಿಕ ಮಹಾಸಭೆಯನ್ನು ಸದ್ರಿ ಸೊಸೈಟಿಯ ಅಧ್ಯಕ್ಷರಾದ ಶ್ರೀ ಸತೀಶ ಶೆಟ್ಟಿ ಪಟ್ಲ ಅವರು, ಸೊಸೈಟಿಯ ನಿರ್ದೇಶಕರೊಂದಿಗೆ ದೀಪ ಬೆಳಗಿಸಿ ಉದ್ಘಾಟಿಸಿದರು. ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿಯವರು ಶ್ರೀ ಸತೀಶ ಶೆಟ್ಟಿ ಪಟ್ಲರವರನ್ನು ಗೌರವಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
ಕಳೆದ 75 ದಿನಗಳಿಂದ ಉತ್ತರ ಅಮೆರಿಕದ ಮೂಲೆಮೂಲೆಗೂ ಯಕ್ಷಗಾನದ ಸವಿರುಚಿಯನ್ನು ಇಲ್ಲಿನ ಪ್ರೇಕ್ಷಕರಿಗೆ ಉಣಬಡಿಸುವುದರ ಜತೆಗೆ, ಯಕ್ಷಗಾನದ ಕಂಪನ್ನು ಎಲ್ಲೆಡೆ ಪಸರಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡದ ಕಲಾವಿದರು ತಮ್ಮ ಈ ತಿರುಗಾಟದ ಕೊನೆಯ ಪ್ರದರ್ಶನವನ್ನು ಟೆಕ್ಸಾಸ್ ಡಲ್ಲಾಸ್ ನಲ್ಲಿ ಸೆ.22ರಂದು ಯಶಸ್ವಿಯಾಗಿ ಮುಗಿಸಿದರು.
ಅಮೇರಿಕಾದಿಂದ ಯಕ್ಷ ಯಾತ್ರೆ ಮುಗಿಸಿ ಮಂಗಳೂರಿಗೆ ಆಗಮಿಸಿದ ಪಟ್ಲ ಸತೀಶ್ ಶೆಟ್ಟಿ ಮತ್ತು ತಂಡ
ಎರಡೂವರೆ ತಿಂಗಳ ಕಾಲ ಅಮೇರಿಕಾದ ತಿರುಗಾಟದಲ್ಲಿ ಹೊಸ ಹೊಸ ದಾಖಲೆಗಳೊಂದಿಗೆ ಯಕ್ಷಗಾನ ಕ್ಷೇತ್ರದಲ್ಲಿ ಇತಿಹಾಸವನ್ನೇ ನಿರ್ಮಿಸಿದ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ತಂಡ ತವರಿಗೆ ಮರಳಿದೆ.
ಅಮೇರಿಕಾ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದ ಪಟ್ಲ ಫೌಂಡೇಶನ್ ಕಲಾವಿದರು
ಅಮೇರಿಕಾ ದೇಶದ ಮೂಲೆ ಮೂಲೆಗೂ ಯಕ್ಷಗಾನದ ಕಂಪನ್ನು ಹರಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ, ಭಾರತಕ್ಕೆ ಮರಳುತಿರುವ ನಮ್ಮ ಹೆಮ್ಮೆಯ ಕಲಾವಿದರು.
“ರಾಮ ರಾಮ ಶ್ರೀ ರಾಮ” ಯಕ್ಷಗಾನ ಬಯಲಾಟದ ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ
ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಮೀರಾಭಯಂದರ್ ನಲ್ಲಿ ಜರಗಲಿರುವ ಪಾವಂಜೆ ಮೇಳದ ರಾಮ ರಾಮ ಶ್ರೀ ರಾಮ ಅದ್ದೂರಿ ಯಕ್ಷಗಾನ ಬಯಲಾಟ ಕಾರ್ಯಕ್ರಮದ ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.
ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಸೆ.17ರಂದು ನಡೆಯಿತು.
ಶ್ರೀಕೃಷ್ಣಲೀಲೆ ಕಂಸವಧೆ ಯಕ್ಷಗಾನ ಕಾರ್ಯಕ್ರಮಕ್ಕೆ ಅಟ್ಲಾಂಟಾ ನಗರಕ್ಕೆ ಪ್ರಯಾಣಿಸಿದ ಕಲಾವಿದರು
ಅಮೇರಿಕಾದ ಫ್ಲೋರಿಡಾ ರಾಜ್ಯದ ಒರ್ಲಾಂಡೊ ನಗರದಲ್ಲಿ ದಿನಾಂಕ 15-09-2024ರಂದು ಶ್ರೀದೇವಿ ಮಹಾತ್ಮೆ ಯಕ್ಷಗಾನವನ್ನು ನಡೆಸಿ ಇಂದು(16-09-2024) ಜಾರ್ಜಿಯ ರಾಜ್ಯದ ಅಟ್ಲಾಂಟಾ ನಗರದಲ್ಲಿ ಶ್ರೀಕೃಷ್ಣಲೀಲೆ ಕಂಸವಧೆ ಯಕ್ಷಗಾನ ಕಾರ್ಯಕ್ರಮಕ್ಕೆ ಕಲಾವಿದರು ಪಯಣಿಸಿದರು.
ಕೊಲಂಬಸ್ ನಿಂದ ಫ್ಲೋರಿಡಾ ರಾಜ್ಯದ ಒರ್ಲಾಂಡೊ ನಗರಕ್ಕೆ ಪ್ರಯಾಣ ಬೆಳೆಸಿದ ಕಲಾವಿದರು
ಅಮೇರಿಕಾ ದೇಶದಲ್ಲಿ ಯಕ್ಷಗಾನದ ದಿಗ್ವಿಜಯ ಸಾಧಿಸಿರುವ ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ನ ಕಲಾವಿದರು ಇಂದು ಒಹಾಯೊ ರಾಜ್ಯದ ರಾಜಧಾನಿ ಕೊಲಂಬಸ್ ನಿಂದ ಫ್ಲೋರಿಡಾ ರಾಜ್ಯದ ಒರ್ಲಾಂಡೊ ನಗರಕ್ಕೆ ಪ್ರಯಾಣ ಬೆಳೆಸಿದರು.
ನೆಟ್ಟಣಿಗೆ ಮುಡ್ನೂರು ಕರ್ನೂರು – ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಕರ್ನೂರು ಇಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭ ಇಂದು ನೆರವೇರಿತು.
ರಾಲಿ ನಗರದಿಂದ ವರ್ಜೀನಿಯಾ ರಾಜ್ಯಕ್ಕೆ ಪ್ರಯಾಣಿಸಿದ ಪಟ್ಲ ಫೌಂಡೇಷನ್ ಕಲಾವಿದರು
ಅಮೇರಿಕಾ ಪ್ರವಾಸದಲ್ಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ತಂಡ ಇಂದು ರಾಲಿ ನಗರದಿಂದ ವರ್ಜೀನಿಯಾ ರಾಜ್ಯದ ರಿಚ್ ಮಂಡ್ ನಗರಕ್ಕೆ ಪ್ರಯಾಣ ಬೆಳೆಸಿದರು.
ಅಮೇರಿಕಾದ ಮಿಚಿಗನ್ ನಲ್ಲಿ ಮಿಂಚಿದ ಯಕ್ಷಧ್ರುವ ಪಟ್ಲ ಫೌಂಡೇಶನ್
ನಮ್ಮ ಸಂಸ್ಕೃತಿ, ಕನ್ನಡ ಭಾಷೆ, ಧಾರ್ಮಿಕ ಚಿಂತನೆಗಳ ಶ್ರೀಮಂತಿಕೆಯನ್ಮು ಪ್ರಚುರ ಪಡಿಸುವುದಕ್ಕೆ ಯಕ್ಷಗಾನ ಉತ್ತಮವಾದ ಕಲಾಪ್ರಕಾರ. ರಾಮಾಯಣ, ಮಹಾಭಾರತ, ಭಾಗವತ ಇತ್ಯಾದಿ ಪುರಾಣಗಳ ಪರಿಚಯ ಮತ್ತು ಅಧ್ಯಯನವು ಮನೋರಂಜನಾತ್ಮಕವಾಗಿ ಸಾಮಾನ್ಯರಲ್ಲಿ ಸಾಮಾನ್ಯರಿಗೂ ಸಹ ಜ್ಞಾನಾರ್ಜಿಸುವಲ್ಲಿ ಯಕ್ಷಗಾನದ ಪಾತ್ರ ಬಹಳ ದೊಡ್ಡದು.
ಮಿಲ್ವಾಕಿಯಿಂದ ಚಾರ್ಲೋಟ್ ನಗರಕ್ಕೆ ಪ್ರಯಾಣಿಸಿದ ಪಟ್ಲ ಫೌಂಡೇಷನ್ ಕಲಾವಿದರು
ಅಮೇರಿಕಾದಲ್ಲಿ ನಮ್ಮ ನಾಡಿನ ಹೆಮ್ಮೆಯ ಯಕ್ಷಗಾನ ಕಲೆಯ ದಿಗ್ವಿಜಯ ಕೈಗೊಂಡ ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ನ ಕಲಾವಿದರ ತಂಡ ಇಂದು ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕಿಯಿಂದ ನಾರ್ತ್ ಕೆರೊಲಿನಾ ರಾಜ್ಯದ ಚಾರ್ಲೋಟ್ ನಗರಕ್ಕೆ ಪ್ರಯಾಣ ಬೆಳೆಸಿದರು.
ಅಮೇರಿಕದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್
ವಿಸ್ಕಾನ್ಸಿನ್ ರಾಜ್ಯದ ಬ್ರೂಕ್ಫೀಲ್ಡ್ ನಗರದಲ್ಲಿ ನಡೆದ ಯಕ್ಷಗಾನ ಕಲೆಯನ್ನು ಹಾಗೂ ಪಟ್ಲ ಫೌಂಡೇಶನ್ ಕೈಗೊಂಡಿರುವ ಮಹಾನ್ ಕಾರ್ಯವನ್ನು ಶ್ಲಾಘಿಸಿ ಅಲ್ಲಿಯ ಮೇಯರ್ ಸ್ಟೀವನ್ ವಿ ಪೋಂಟೋ ಅವರು ಕೂಡ ಆಗಸ್ಟ್ 18ನೇ ತಾರೀಕು ಬ್ರೂಕ್ಫೀಲ್ಡ್ ನಗರದಲ್ಲಿ ಯಕ್ಷಧ್ರುವವ ಪಟ್ಲ ಫೌಂಡೇಶನ್ ಡೇ ಎಂದು ಘೋಷಿಸಿದ್ದಾರೆ.
ಆಸ್ಟಿನ್ ನಗರದಿಂದ ಡೆಟ್ರಾಯಿಟ್ ಕಡೆಗೆ ಪ್ರಯಾಣ ಬೆಳೆಸಿದ ಪಟ್ಲ ಫೌಂಡೇಷನ್ ಕಲಾವಿದರು
ಅಮೇರಿಕಾದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಆಸ್ಟಿನ್ ನಗರದಿಂದ ಇಂದು ಡೆಟ್ರಾಯಿಟ್ ನಗರಕ್ಕೆ ಪ್ರಯಾಣ ಬೆಳೆಸಿದರು. ಆಸ್ಟಿನ್ ಕನ್ನಡ ಸಂಘದ ಪದಾಧಿಕಾರಿಗಳು ಆತ್ಮೀಯವಾಗಿ ಕಲಾವಿದರನ್ನು ಆಸ್ಟಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಬೀಳ್ಗೊಟ್ಟರು.
ಯಕ್ಷಾಶ್ರಯ ಫಲಾನುಭವಿಗಳಿಗೆ ಗೃಹನಿರ್ಮಾಣದ ಮೊತ್ತ ವಿತರಣೆ
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ರಿ. ಮಂಗಳೂರು. ಯಕ್ಷಾಶ್ರಯ ಫಲಾನುಭವಿಗಳಿಗೆ ಇಂದು (05-08-2024) ಸಂಜೆ ಎಂಪೈರ್ ಮಾಲ್ ನಲ್ಲಿರುವ ಸಿ ಎ ಸುದೇಶ್ ಕುಮಾರ್ ರೈ ಅವರ ಆಫೀಸಿನ ಬಳಿ ಗೃಹನಿರ್ಮಾಣದ ಮುಂದಿನ ಮೊತ್ತ ಸುಮಾರು 10 ಲಕ್ಷದವರೆಗೆ ವಿತರಿಸಲಾಯಿತು.
ಲಾಸ್ಏಂಜಲೀಸ್ ನಿಂದ ಹ್ಯೂಸ್ಟನ್ ಗೆ ಪ್ರಯಾಣ ಬೆಳೆಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ
ಅಮೇರಿಕಾದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ತಂಡ ಇಂದು ಲಾಸ್ಏಂಜಲೀಸ್ ನಿಂದ ಹ್ಯೂಸ್ಟನ್ ಗೆ ಪ್ರಯಾಣ ಬೆಳೆಸಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ದಿನ: ಐತಿಹಾಸಿಕ ಮೈಲಿಗಲ್ಲು
ಫೀನಿಕ್ಸ್‌ನಲ್ಲಿರುವ ಪುತ್ತಿಗೆ ಮಠದ ಶ್ರೀ ವೆಂಕಟಕೃಷ್ಣ ದೇವಸ್ಥಾನದಲ್ಲಿ ನಡೆದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ಅಭೂತಪೂರ್ವ ಗೌರವಕ್ಕೆ ಪಾತ್ರವಾಗಿದೆ. ಜುಲೈ 27 ರಂದು ಈ ಪ್ರದರ್ಶನ ನಡೆದ ಕಾರಣ ಆ ದಿನವನ್ನು ಅರಿಜೋನಾದ ಟೆಂಪೆ ನಗರದ ಮೇಯರ್ ಶ್ರೀ ಕೋರೆ ವುಡ್ಸ್, “ಯಕ್ಷಧ್ರುವ ಪಟ್ಲ ಫೌಂಡೇಶನ್ ದಿನ” ಎಂದು ಘೋಷಿಸಿದ್ದಾರೆ!
ಅಮೇರಿಕಾದಲ್ಲಿ 75 ದಿನಗಳ ಯಕ್ಷಗಾನ ಪ್ರಚಾರ: ಪಟ್ಲ ಫೌಂಡೇಷನ್ ಟ್ರಸ್ಟ್‌ನ ಹಿರಿಮೆ
ಪಟ್ಲಾ ಫೌಂಡೇಶನ್ ಜುಲೈ 9 ರಂದು ಅಮೆರಿಕ ಪ್ರವಾಸ ಕೈಗೊಂಡು ಅಮೇರಿಕಾದಲ್ಲಿ ಯಕ್ಷಗಾನ ಕಾರ್ಯಕ್ರಮ ಮತ್ತು ತರಬೇತಿ ಶಿಬಿರಗಳನ್ನು ಮಾಡಿ ಸತತ 75 ದಿನಗಳವರೆಗೆ ಅಲ್ಲಿನ ಯಕ್ಷಾಭಿಮಾನಿಗಳಿಗೆ ಈ ಕಲೆಯ ವೈಭವವನ್ನು ನೀಡುತ್ತಿದ್ದಾರೆ.
ಅಮೇರಿಕಾದಲ್ಲಿರುವ ಭಾರತದ ರಾಯಭಾರಿಯಿಂದ ಯಕ್ಷಗಾನ ಕಲೆಗೆ ಅಪಾರ ಮೆಚ್ಚುಗೆ
ಅಮೇರಿಕಾದ ಸಿಯಾಟಲ್ ನಲ್ಲಿ ನಡೆದ “ಶ್ರೀ ದೇವಿ ಮಹಾತ್ಮ್ಯೆ” ಯಕ್ಷಗಾನದ ಕಾರ್ಯಕ್ರಮಕ್ಕೆ ಭಾರತೀಯ ರಾಯಭಾರಿ (Consulate General) ಪ್ರಕಾಶ್ ಗುಪ್ತಾ ಹಾಗೂ ರಾಯಭಾರಿ ಕಛೇರಿಯ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಅವರು ಪಟ್ಲ ಫೌಂಡೇಶನ್ ಗೆ ಎಲ್ಲಾ ರೀತಿಯ ಸಹಕಾರ Consulate ಕಡೆಯಿಂದ ನೀಡುವುದಾಗಿ ಭರವಸೆ ನೀಡಿದರು.
ಸಿಯಾಟಲ್ ನಿಂದ ಫೀನಿಕ್ಸ್ ಗೆ ಪ್ರಯಾಣ ಬೆಳೆಸಿದ ಪಟ್ಲ ಫೌಂಡೇಶನ್ ತಂಡ
ಅಮೇರಿಕಾ ಪ್ರವಾಸದಲ್ಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ ಸಿಯಾಟಲ್ ನಿಂದ ಫೀನಿಕ್ಸ್ ಗೆ ಪ್ರಯಾಣ ಬೆಳೆಸಿತು. ಈ ವೇಳೆ ಸಿಯಾಟಲ್ ನ ಫೌಂಡೇಶನ್ ಅಭಿಮಾನಿ ಬಂಧುಗಳು ಪ್ರೀತಿ ಪೂರ್ವಕವಾಗಿ ಕಲಾವಿದರನ್ನು ಬೀಳ್ಗೊಟ್ಟರು.
ಸರಪಾಡಿ ಸರಕಾರಿ ಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿ ಉದ್ಘಾಟನೆ
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ನಡೆಸುವ ಯಕ್ಷಧ್ರುವ-ಯಕ್ಷಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ತರಬೇತಿ ತರಗತಿ ಫೌಂಡೇಶನ್ ನ ಸರಪಾಡಿ ಘಟಕದ ಸಹಕಾರದಲ್ಲಿ ಸರಪಾಡಿ ಸ.ಪ್ರೌ.ಶಾಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರಿನಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ
ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಮಂಗಳೂರು, ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರಿನಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಉಪ್ಪಿನಂಗಡಿ ಘಟಕದ ವತಿಯಿಂದ ಕುಂಬ್ಳೆ ಶ್ರೀಧರ ರಾವ್ ಇವರಿಗೆ ನುಡಿನಮನ ಕಾರ್ಯಕ್ರಮ
ಉಪ್ಪಿನಂಗಡಿ ಪರಿಸರದ 34 ನೆಕ್ಕಿಲಾಡಿ ನಿವಾಸಿ ತೆಂಕುತಿಟ್ಟಿನ ಅಗ್ರಮಾನ್ಯ ಹಿರಿಯ ಕಲಾವಿದರಾದ ಶ್ರೀಮಾನ್ ಕುಂಬ್ಳೆ ಶ್ರೀಧರ ರಾವ್ ಇವರ ಆಕಸ್ಮಿಕ ನಿಧನಕ್ಕೆ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮ ಉಪ್ಪಿನಂಗಡಿಯ ಶ್ರೀಗುರು ಸುದೀಂದ್ರ ಕಲಾಮಂದಿರದಲ್ಲಿ ಜರಗಿತು.
ಯಕ್ಷಾಶ್ರಯ ಯೋಜನೆ: ಪ್ರಶಾಂತ ಕಲ್ಲಡ್ಕ ಅವರಿಗೆ ಮನೆ ಹಸ್ತಾಂತರ
ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಯಕ್ಷಾಶ್ರಯ ಯೋಜನೆಯಲ್ಲಿ ನಿರ್ಮಿಸಿದ ವಿನೂತನ ಮನೆಯನ್ನು ಕಟೀಲು ಮೇಳದ ಕಲಾವಿದರಾದ ಪ್ರಶಾಂತ ಕಲ್ಲಡ್ಕ ಅವರ ಕುಟುಂಬಕ್ಕೆ 12.07.2024 ಶುಕ್ರವಾರದಂದು ಹಸ್ತಾಂತರಿಸಲಾಯಿತು. ಎಂ ಆರ್ ಜಿ ಗ್ರೂಪ್ಸ್ ನ ಸಂಸ್ಥಾಪಕರಾದ ಡಾ. ಪ್ರಕಾಶ್ ಶೆಟ್ಟಿ ಬಂಜಾರ ಅವರು ಈ ಮನೆಯನ್ನು ನಿರ್ಮಿಸಲು ಆರ್ಥಿಕ ಸಹಕಾರ ನೀಡಿದ್ದಾರೆ.
ಅಮೆರಿಕಾ ತಲುಪಿದ ಪಟ್ಲ ಫೌಂಡೇಶನ್ ತಂಡ
ಅಮೇರಿಕಾ ದೇಶಕ್ಕೆ ಬಂದಿಳಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ. ತಂಡವನ್ನು ಸ್ಯಾನ್ ಫ್ರಾನ್ಸಿಸ್ಕೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ USA ಘಟಕದ ಜನರಲ್ ಸೆಕ್ರೆಟರಿ ಡಾ.ಶ್ರೀಧರ್ ಆಳ್ವಾ, ಸುಭಾಷ್ ಶೆಟ್ಟಿ ಮತ್ತು ಅಜಯ್ ಹಾಗೂ ತಂಡ.
ಕೇಪು, ಬಂಟ್ವಾಳ: ಉಚಿತ ಯಕ್ಷಗಾನ ತರಗತಿಯ ಉದ್ಘಾಟನೆ
ಯಕ್ಷಗಾನ ಶಿಕ್ಷಕರಾದ ಶ್ರೀ ಗಣೇಶ ಕುಂದಲಕೋಡಿ ದೀಪ ಬೆಳಗಿಸುವುದರ ಮೂಲಕ ಯಕ್ಷಗಾನ ತರಗತಿಗೆ ಚಾಲನೆ ನೀಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ವೆಂಕಟ ರಾಘವೇಂದ್ರ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.