yakshadhruvapatlafoundation.org

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ದಶಮ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಗರದ ಪುರಭವನದಲ್ಲಿ ಶುಕ್ರವಾರ ಜರುಗಿತು.

ಪಟ್ಲ ಫೌಂಡೇಶನ್ ಟ್ರಸ್ಟ್‌ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.

ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ “ಕಟೀಲು ದುರ್ಗೆಯ ಸನ್ನಿಧಿಯಲ್ಲಿ ಪ್ರಾರಂಭಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಲಕ ನೊಂದ ಕಲಾವಿದರಿಗೆ ನೆರವಾದ ಸಾರ್ಥಕತೆ ನಮ್ಮಲ್ಲಿದೆ. ಇದು ನನ್ನ ಒಬ್ಬನಿಂದ ಸಾಧ್ಯವಾಗಿಲ್ಲ, ನಮ್ಮೆಲ್ಲರ ಶ್ರಮದಿಂದ ಸಾಧ್ಯವಾಗಿದೆ. 10ನೇ ವರ್ಷ ಪೂರೈಸುತ್ತಿರುವ ಟ್ರಸ್ಟ್ ವತಿಯಿಂದ ಈ ಬಾರಿ ಜೂನ್ 1ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹತ್ತಾರು ಸಮಾಜಮುಖ ಕಾಠ್ಯಕ್ರಮ ಆಯೋಚಿಸಲಾಗಿದೆ ಎ0ದರು.

ಮಹಾಪೋಷಕ ಕೆ.ಕೆ.ಶೆಟ್ಟಿಕುತ್ತಿಕಾರ್. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಟ್ರಸ್ಟ್ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಟಿ.ಜಿ.ರಾಜಾರಾಮ್ ಭಟ್, ಯೋಗೀಂದ್ರ ಭಟ್ ಉಳಿ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರಾಜೀವ ಪೂಜಾರಿ ಕೈಕಂಬ, ರವಿಚಂದ್ರ ಶೆಟ್ಟಿ ಅಶೋಕನಗರ, ಉದಯಕುಮಾರ್, ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಶಿ, ಭುಜಬಲಿ ಧರ್ಮಸ್ಥಳ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ, ಗೌರವಾಧ್ಯಕ್ಷೆ ಆರತಿ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಪುರುಷೋತ್ತಮ್ ಭಂಡಾರಿ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರದೀಪ್ ಆಳ್ವ ವಂದಿಸಿದರು. ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾದ ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಗೌರವಿಸಲಾಯಿತು.

[Best_Wordpress_Gallery id=”205″ gal_title=”ಜೂನ್ 1ರಂದು ಪಟ್ಲ ದಶಮ ಸಂಭ್ರಮ”]

 

Leave a Reply

Your email address will not be published. Required fields are marked *