ಎರಡೂವರೆ ತಿಂಗಳ ಕಾಲ ಅಮೇರಿಕಾದ ತಿರುಗಾಟದಲ್ಲಿ ಹೊಸ ಹೊಸ ದಾಖಲೆಗಳೊಂದಿಗೆ ಯಕ್ಷಗಾನ ಕ್ಷೇತ್ರದಲ್ಲಿ ಇತಿಹಾಸವನ್ನೇ ನಿರ್ಮಿಸಿದ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರ ತಂಡ ತವರಿಗೆ ಮರಳಿದೆ.
ಅಮೇರಿಕಾದಿಂದ ಯಕ್ಷ ಯಾತ್ರೆ ಮುಗಿಸಿ ಬೆಂಗಳೂರಿಗೆ ಬಂದಿಳಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡವನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಘಟಕದ ಸಂಚಾಲಕರಾದ ಗೋಪಿ ಭಟ್ ಅವರು ಶಾಲು ಫಲವಸ್ತುಗಳೊಂದಿಗೆ ಸ್ವಾಗತಿಸಿ ಮಂಗಳೂರಿಗೆ ಕಳುಹಿಸಿಕೊಟ್ಟರು.
ನಂತರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 11 ಗಂಟೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕೇಂದ್ರ ಸಮಿತಿಯ ಸದಸ್ಯರು ಕಲಾವಿದರ ತಂಡವನ್ನು ಆತ್ಮೀಯವಾಗಿ ಸ್ವಾಗತಿಸಿದರು.