ಕ್ಷಿಪ್ರ ಅವಧಿಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಬೆಂಗಳೂರು ಮಹಾನಗರದಲ್ಲಿ ಒಂದೇ ದಿನ ಎರಡು ಕಾರ್ಯಕ್ರಮಗಳು ಸಂಪನ್ನವಾದವು.
ವಿಜಯ ಕರ್ನಾಟಕ ಕನ್ನಡ ಹಬ್ಬದ ಪ್ರಯುಕ್ತ ಬೆಂಗಳೂರು ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಮಹಿಷ ವಧೆ ಯಕ್ಷಗಾನ ಪ್ರದರ್ಶನ ನಡೆಯಿತು.
ಕೊಡಿಗೆಹಳ್ಳಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ದೀಪೋತ್ಸವ ಪ್ರಯುಕ್ತ ದಮಯಂತೀ ಪುನಃ ಸ್ವಯಂವರ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರುಗಿತು.