yakshadhruvapatlafoundation.org

ಕಾರ್ಕಳ: ಯಕ್ಷಗಾನ ತರಗತಿ ಉದ್ಘಾಟನೆ

ನಮ್ಮ ಕರಾವಳಿಯಲ್ಲಿ ಇತಿಹಾಸ ನಿರ್ಮಿತ ಕಲೆ ಯಕ್ಷಗಾನ .ಅಂತಹ ಕಲೆ ಉಳಿದು ಮುಂದಿನ ಜನಾಂಗಕ್ಕೆ ದಾಟಿಸುವ ಕೆಲಸ ನಮ್ಮ ಕಾರ್ಕಳದ ಯಕ್ಷ ಕಲಾರಂಗ ಸಂಸ್ಥೆಯು ಕಳೆದ ಹನ್ನೆರಡು ವರ್ಷಗಳಿಂದ ಮಾಡುತ್ತಿದೆ.

ಯಕ್ಷಗಾನ ಜ್ಞಾನ ವೃದ್ದಿಗೆ ಪ್ರಯೋಜನ : ಪ್ರಸಿದ್ಧ ಪಿ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರಕಾರಿ ಪ್ರೌಢ ಶಾಲೆ, ಮೀನಕಳಿಯ ಬೈಕಂಪಾಡಿಯಲ್ಲಿ 2024-25ನೇ ಸಾಲಿನ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು. ಶ್ಯಾಮ ಕನ್ ಸ್ಟ್ರಕ್ಷನ್ಸ್ ನ ಇಂಜಿನಿಯರ್ ಪ್ರಸಿದ್ಧ ಪಿ. ಕಾರ್ಯಕ್ರಮ ಉದ್ಘಾಟಿಸಿ, ಯಕ್ಷಗಾನ ಎಲ್ಲಾ ಪ್ರಕಾರಗಳಲ್ಲಿಯೂ ಜ್ಞಾನ ವೃದ್ಧಿಗೆ ಪ್ರಯೋಜನ ವಾಗುತ್ತದೆ, ಯಕ್ಷಗಾನ ಬರೇ ಕಲೆಗೋಸ್ಕರ ಕಲಿಯುವುದಲ್ಲ, ನಮ್ಮ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಲು ಸದವಕಾಶ ಎಂದು ಅವರು ತಿಳಿಸಿದರು. ಯಕ್ಷ ಶಿಕ್ಷಣ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ್ (USA) […]

ಅರ್ಕುಳ ಫರಂಗಿಪೇಟೆ: ಉಚಿತ ಯಕ್ಷಗಾನ ತರಬೇತಿ ಅಭಿಯಾನ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು ಶ್ರೀರಾಮ ವಿದ್ಯಾ ಸಂಸ್ಥೆಗಳು, ಅರ್ಕುಳ ಫರಂಗಿಪೇಟೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎ. ಕೆ. ಜಯರಾಮ ಶೇಕ ಇವರ ಅಧ್ಯಕ್ಷತೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಅರ್ಕುಳ ಬೀಡು ವಜ್ರನಾಭ ಶೆಟ್ಟಿ ಇವರು ನಡೆಸಿಕೊಟ್ಟರು.

ಕಡಂದಲೆ: ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ

ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ.) ಮಂಗಳೂರು, ಇದರ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ಮೂಡಬಿದ್ರೆಯ ಕಡಂದಲೆ ಶ್ರೀ ಸುಬ್ರಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಪಟ್ಲ ಫೌಂಡೇಶನ್ ಮೂಡಬಿದ್ರಿ ಘಟಕದ ಸಹಕಾರದೊಂದಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ ಕಾರ್ಯಕ್ರಮವನ್ನು ಶ್ರೀಯುತ ಉಮನಾಥ್ ಕೋಟ್ಯಾನ್ ಶಾಸಕರು ಮುಲ್ಕಿ ಮೂಡಬಿದ್ರಿ ಕ್ಷೇತ್ರ ಇವರು ಉದ್ಘಾಟಿಸಿದರು.

ಬಂಟ್ವಾಳ: ಯಕ್ಷ ಶಿಕ್ಷಣ ಉದ್ಘಾಟನೆ

ಬಂಟ್ವಾಳ ತಾಲೂಕಿನ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಎರಡನೇ ವರ್ಷದ ಯಕ್ಷ ಧ್ರುವ ಯಕ್ಷ ಶಿಕ್ಷಣದ ಉದ್ಘಾಟನೆಯು ಈ ದಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಅಧ್ಯಕ್ಷತೆಯಲ್ಲಿ ನೆರವೇರಿತು.

ಬೈಕಂಪಾಡಿ: ಯಕ್ಷನಾಟ್ಯ ತರಬೇತಿ ಉದ್ಘಾಟನೆ

ದಿನಾಂಕ 19/06.2024 ರಂದು ಬೆಳಿಗ್ಗೆ 11.00 ಗಂಟೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರಕಾರಿ ಪ್ರೌಢ ಶಾಲೆ, ಮೀನಕಳಿಯ – ಬೈಕಂಪಾಡಿ ಇಲ್ಲಿ 2024 – 25 ನೇ ಸಾಲಿನ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು.

ಪಳ್ಳಿ ನಿಂಜೂರು : ಯಕ್ಷ ಶಿಕ್ಷಣ ನಾಟ್ಯ ತರಬೇತಿ

ಯಕ್ಷಧ್ರುವ ಪಟ್ಲ ಪೌಂಡೇಶನ್ ಪಳ್ಳಿ ನಿಂಜೂರು ಇದರ ವತಿಯಿಂದ ಪಳ್ಳಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ ಕಾರ್ಯಕ್ರಮವನ್ನು ಬಹುಮೇಳಗಳ ವ್ಯವಸ್ಥಾಪಕರಾದ ಪಳ್ಳಿ ಕಿಶನ್ ಹೆಗ್ಡೆ ಉದ್ಘಾಟಿಸಿದರು.

ಬೋಳಂತೂರು: ಯಕ್ಷಧ್ರುವ ಪಟ್ಲ ಪೌಂಡೇಷನ್ ಪ್ರಾಯೋಜಿತ ಯಕ್ಷಧ್ರುವ-ಯಕ್ಷ ಶಿಕ್ಷಣ

ಬಂಟ್ವಾಳ ತಾಲ್ಲೂಕಿನ ಬೋಳಂತೂರು ಚಿಣ್ಣರ ಲೋಕಸೇವಾಬಂಧು ದತ್ತು ಸ್ವೀಕರಿಸಿ ಉನ್ನತಿಕರಿಸಿದ ಸರಕಾರಿ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಷನ್ ಪ್ರಾಯೋಜಿತ ಯಕ್ಷಧ್ರುವ-ಯಕ್ಷ ಶಿಕ್ಷಣವನ್ನು ಶಾಲಾ ಮೇಲುಸ್ತುವಾರಿ ಅಧ್ಯಕ್ಷರಾದ ಕೃಷ್ಣಪ್ಪ ಸಪಲ್ಯರ ಅಧ್ಯಕ್ಷತೆಯಲ್ಲಿ ಸರಳ ಸಮಾರಂಭದ ಮೂಲಕ ಉದ್ಘಾಟನೆ ಮಾಡಲಾಯ್ತು.

ನಿಡ್ಲೆ: ಯಕ್ಷನಾಟ್ಯ ತರಬೇತಿ ಉದ್ಘಾಟನೆ

ದಿನಾಂಕ 18-06-2024 ರಂದು ಅಪರಾಹ್ನ 2.30 ಗಂಟೆಗೆ  ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರ್ಕಾರಿ ಪ್ರೌಢ ಶಾಲೆ ನಿಡ್ಲೆ, ಬೆಳ್ತಂಗಡಿ ತಾಲೂಕು ಇಲ್ಲಿ  2024-25 ನೇ ಸಾಲಿನ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು.

‘ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮ ಯಕ್ಷಗಾನ’: ಗಿರೀಶ್ ಶೆಟ್ಟಿ

ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ರಮ್ಯ ಅದ್ಬುತ ಕಲೆ ಎಂದು ಗಿರೀಶ್ ಶೆಟ್ಟಿ ಅಧ್ಯಕ್ಷರು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು ಎಕ್ಕಾರು ಘಟಕ ಇವರು ಅಭಿಪ್ರಾಯಪಟ್ಟರು.