yakshadhruvapatlafoundation.org

ಪೆರುವಾಜೆ : ಬಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನ

ಪೆರುವಾಜೆ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಪ್ರಯುಕ್ತ ಶನಿವಾರ ರಾತ್ರಿ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶನಿವಾರ ರಾತ್ರಿ ಬಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತ್ತು.

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷಗಾನ ತಾಳಮದ್ದಳೆ

ಯಮುನ ಸಿಟಿ ಕ್ಲಬ್ ಹೌಸ್ ಕುಳಾಯಲ್ಲಿ ವಿದ್ಯಾ ಹರ್ಬ್ಸ್ ಬೆಂಗಳೂರು ಆಡಳಿತ ವರ್ಗದ ಗೌರವಾರ್ಥ ನಡೆದ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ದಾಮೋದರ ರೈ (ಆದಿ ಎಂಟರ್ಪ್ರೈಸಸ್, ಬಿಜೈ), ಪುರುಷೋತ್ತಮ್ ಆರ್. ಶೆಟ್ಟಿ ಇವರ ಸಾರಥ್ಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಮಹಾಪೋಷಕರು ಶ್ರೀ ಕೆ. ಶ್ಯಾಮ್ ಪ್ರಸಾದ್ (ಎಂ ಡಿ, ವಿದ್ಯಾ ಹರ್ಬ್ಸ್ ಗ್ರೂಪ್ ಆಫ್ ಕಂಪನಿ, ಬೆಂಗಳೂರು) ದಂಪತಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಯಕ್ಷಗಾನ ತಾಳಮದ್ದಳೆ […]

ಪಟ್ಲರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ: ಪ್ರಕಾಶ್ ಶೆಟ್ಟಿ

ಯಕ್ಷಧ್ರುವ ಪಟ್ಲವಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು. ಎಂ.ಆರ್.ಜಿ. ಗ್ರೂಫ್ ಚೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ ಕಂಪನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿಯವರದ್ದಾಗಿದೆ.

ಕಾರ್ಕಳ: 9ನೇ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ರಿ. ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ ಪಟ್ಲ ಸಂಭ್ರಮವು ಇದೇ ನವೆಂಬರ್‌ 16 ನೇ ಶನಿವಾರ ಕಾರ್ಕಳ ಮಾರಿಗುಡಿಯ ವಠಾರದಲ್ಲಿ ನಡೆಯಲಿದ್ದು, ಇಂದು ಆಮಂತ್ರಣ ಪತ್ರಿಕೆ ಮಾರಿಯಮ್ಮನ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು.