ಜಿ. ಕೆ ನಾವಡರಿಗೆ ತುರ್ತು ಆರ್ಥಿಕ ಸಹಾಯ ನೀಡಿದ ಪಟ್ಲ ಫೌಂಡೇಶನ್

ಯಕ್ಷಗಾನದ ಪ್ರಸಿದ್ದ ಹಿರಿಯ ಭಾಗವತ ಜಿ. ಕೆ ನಾವಡ ಬಾಯಾರು ಇವರ ಆರೋಗ್ಯ ತುಂಬಾ ಗಂಭೀರ ಸ್ಥಿತಿಯಲ್ಲಿದ್ದು ಅವರ ಧರ್ಮಪತ್ನಿ ಶ್ರೀದೇವಿ ಯವರು ಮತ್ತು ನಾವಡರ ಸ್ನೇಹಿತ ಕೀರ್ತಿ ಭಟ್ ರವರು ಇಂದು ಪಟ್ಲ ಸತೀಶ್ ಶೆಟ್ಟಿ ಯವರನ್ನು ಭೇಟಿಯಾಗಿ ತುರ್ತು ಆರ್ಥಿಕ ಸಹಾಯಕ್ಕಾಗಿ ಯಕ್ಷದ್ರುವ ಪಟ್ಲ ಫೌಂಡೇಶನ್ ಗೆ ಮನವಿ ಸಲ್ಲಿಸಿದರು.
ಉಡುಪಿಯ ಪಲಿಮಾರು ಮಠದ ಪೂಜ್ಯ ಸ್ವಾಮೀಜಿಯವರೊಂದಿಗೆ ಪ್ರಯಾಗ್ ರಾಜ್ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ

ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಕೇಂದ್ರೀಯ ಸಮಿತಿಯ ತಂಡವನ್ನು ಪೂಜ್ಯ ಸ್ವಾಮೀಜಿಯವರ ಶಿಷ್ಯ ವೃಂದದವರು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಊಟ ಫಲಹಾರಗಳನ್ನು ನೀಡಿ ಸತ್ಕರಿಸಿದರು. ಹಾಗೂ ಬ್ರಾಹ್ಮೀ ಮುಹೂರ್ತದಲ್ಲಿ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ ನೇತೃತ್ವದಲ್ಲಿ ನೆರವೇರಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಅಮೇರಿಕಾದ ಉದ್ಯಮಿಯಿಂದ 1.25 ಕೋಟಿ ದೇಣಿಗೆ

ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶ್ರೀ ಶಾರದಾ ಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಅವರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ಶುಭದಿನವೇ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಒಂದು ಕೋಟಿ ಇಪ್ಪತ್ತೈದು ಲಕ್ಷ ಮೊತ್ತದ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.
ಕತೆ ಕೈಲಾಸ ಸಿನಿಮಾಕ್ಕೆ ಮುಹೂರ್ತ

ಲಕುಮಿ ಸಿನಿ ಕ್ರಿಯೇಷನ್ ವತಿಯಿಂದ ಶ್ರೀ ಕದಳಿ ಸಿನಿ ಪ್ರೊಡಕ್ಷನ್ ಇವರ ಸೂರಜ್ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ‘ಕತೆ ಕೈಲಾಸ’ ಕನ್ನಡ, ತುಳು ಸಿನಿಮಾದ ಮುಹೂರ್ತ ಸಮಾರಂಭ ಕದ್ರಿ ದೇವಸ್ಥಾನದಲ್ಲಿ ಜರುಗಿತು.
ಪೆರುವಾಜೆ : ಬಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನ

ಪೆರುವಾಜೆ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಪ್ರಯುಕ್ತ ಶನಿವಾರ ರಾತ್ರಿ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶನಿವಾರ ರಾತ್ರಿ ಬಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತ್ತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಉಪ್ಪಳ ಘಟಕದ 7ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಉಪ್ಪಳ ಘಟಕದ 7ನೇ ವಾರ್ಷಿಕೋತ್ಸವವು ಶ್ರೀಹರಿ ಭಜನಾ ಮಂದಿರ ಕುಳೂರು ಇಲ್ಲಿ ಉಪ್ಪಳ ಘಟಕದ ಗೌರವಾಧ್ಯಕ್ಷರಾದ ಶ್ರೀ ಪಿ. ಆರ್. ಶೆಟ್ಟಿ ಪೊಯ್ಯೇಲು ಕುಳೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಯಕ್ಷಧ್ರುವ ಯುವ ಯಕ್ಷಗಾನ ಸ್ಪರ್ಧೆಗೆ ಆಹ್ವಾನ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಯಕ್ಷಧ್ರುವ ಯುವ ಯಕ್ಷಗಾನ ಸರ್ಧೆಯು 2025ರ ಎಪ್ರಿಲ್ ತಿಂಗಳಾಂತ್ಯದಲ್ಲಿ ನಡೆಯಲಿದೆ. ಇದು ತೆಂಕು ಬಡಗುತಿಟ್ಟುವಿನ ಯುವ ಯಕ್ಷಗಾನ ಕಲಾವಿದರ ಬಯಲಾಟ ಸ್ಪರ್ಧೆಯಾಗಿದ್ದು, ಪ್ರಸಕ್ತ ಸ್ಪರ್ಧೆಯಲ್ಲಿ ಮೇಳದಲ್ಲಿ ತಿರುಗಾಟ ಮಾಡಿದ, ತಿರುಗಾಟ ಮಾಡುತ್ತಿರುವ ಕಲಾವಿದರು ಭಾಗವಹಿಸಬಹುದಾಗಿದೆ.
ಕೇಪು: ಯಕ್ಷ ಶಿಕ್ಷಣ ವಿದ್ಯಾರ್ಥಿಗಳ ರಂಗ ಪ್ರವೇಶ ಹಾಗೂ ಯಕ್ಷಗಾನ ಪ್ರದರ್ಶನ

ದಿನಾಂಕ 6.01.2025ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಯಕ್ಷಧ‍್ರುವ ಪಟ್ಲಾ ಫೌಂಡೇಶನ್ ರಿ.ಮಂಗಳೂರು ವಿಟ್ಲ ಘಟಕದ ಸಹಯೋಗದಲ್ಲಿ ಉಚಿತ ಯಕ್ಷ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ರಂಗ ಪ್ರವೇಶ ಹಾಗೂ ಮಕ್ಕಳ ಯಕ್ಷಗಾನ ಪ್ರದರ್ಶನ ಯಕ್ಷ ಗುರುಗಳಾದ ಗಣೇಶ ಆಚಾರ್ಯರವರ ನಿರ್ದೇಶನದಲ್ಲಿ ಅತ್ಯುತ್ತಮವಾಗಿ ಮೂಡಿಬಂದಿತು.
ಪಟ್ಲರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ: ಪ್ರಕಾಶ್ ಶೆಟ್ಟಿ

ಯಕ್ಷಧ್ರುವ ಪಟ್ಲವಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು. ಎಂ.ಆರ್.ಜಿ. ಗ್ರೂಫ್ ಚೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ ಕಂಪನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿಯವರದ್ದಾಗಿದೆ.
ಜಾತಿ, ಧರ್ಮ ಒಗ್ಗೂಡಿಸುವ ಕಾರ್ಯ: ಪೂಂಜ

ಯಕ್ಷಗಾನಕ್ಕೆ ಹೊಸ ಕಲ್ಪನೆ ಕೊಟ್ಟವರು ಪಟ್ಲ ಸತೀಶ್ ಶೆಟ್ಟಿಯಾದರೆ ಅದಕ್ಕೆ ಶಶಿಯಾಗಿ ಬೆಳಕು ಕೊಟ್ಟವರು ಶಶಿಧರ ಶೆಟ್ಟಿ ಅವರು. ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ಮನಸ್ಸು ಕರಾವಳಿಯಲ್ಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
