yakshadhruvapatlafoundation.org

ಈ ನೆಲದ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ಕೆಲಸ ಯಕ್ಷಗಾನ‌ ಮಾಡಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ

Mangaluru: ಮಂಗಳೂರು: ಈ ನೆಲದ ಅಸ್ಮಿತೆ ಸನಾತನ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕುತ್ತಿರುವವರು ಕರಾವಳಿಗರು. ಇಲ್ಲಿ ಕಲೆ ಮತ್ತು ಸಂಸ್ಕೃತಿ ದೊಡ್ಡ ಪಾತ್ರವನ್ನು ವಹಿಸಿಕೊಂಡಿದೆ. ಈ ನೆಲದ ಕಲೆ ಮತ್ತು ಸಂಸ್ಜೃತಿಯನ್ನು ಉಳಿಸುವ ಕೆಲಸ ಯಕ್ಷಗಾನ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದರು. ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದೊಂದಿಗೆ ನಡೆದ ಯಕ್ಷಧ್ರುವ-ಯಕ್ಷ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26 ವನ್ನು […]

ಕಡಬ ತಾಲೂಕು ಘಟಕದ ವತಿಯಿಂದ ಶರವೂರಿನಲ್ಲಿ ಪಾವಂಜೆ ಮೇಳದ ಛಾಯನಂದನ ಯಕ್ಷಗಾನ

ಆಲಂಕಾರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಕಡಬ ತಾಲ್ಲೂಕು ಘಟಕದ ವತಿಯಿಂದ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಛಾಯಾನಂದನ ಯಕ್ಷಗಾನ ಬಯಲಾಟ ನಡೆಯಿತು.ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರನ್ನು ಕಡಬ ತಾಲ್ಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಕಡಬ ತಾಲ್ಲೂಕು ಘಟಕದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು ರವರು ಯಕ್ಷಧ್ರುವ ಪಟ್ಲ ಪೌಂಡೇಶನ್ ವತಿಯಿಂದ […]

‘ತ್ರಿಜನ್ಮ ಮೋಕ್ಷ’ ಯಕ್ಷಗಾನ ಬಯಲಾಟದಲ್ಲಿ ಪಟ್ಲ ಫೌಂಡೇಶನಿಗೆ ನೆನಪಿನ ಕಾಣಿಕೆ

ಜಪ್ಪು ಮಜಿಲ ಹತ್ತು ಸಮಸ್ತರ ವತಿಯಿಂದ ಮಂಗಳಾದೇವಿ ದೇವಸ್ಥಾನದ ಎದುರುಗಡೆ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಯವರಿಂದ ‘ತ್ರಿಜನ್ಮ ಮೋಕ್ಷ’ ಎಂಬ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ರೂ. ಒಂದು ಲಕ್ಷ ಮೊತ್ತದ ಚೆಕ್‌ನ್ನು ಹಾಗೂ 2 ಬೆಳ್ಳಿಯ ದೀಪವನ್ನು ಮೇಳದ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ ಇವರಿಗೆ ನೀಡಲಾಯಿತು.

ಪಾವಂಜೆ ಮೇಳ: 5ನೇ ವರ್ಷದ ತಿರುಗಾಟ ಆರಂಭ

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇದರ ಯಕ್ಷಗಾನ ಮೇಳದ 5ನೇ ವರ್ಷದ ತಿರುಗಾಟವು 4 ಬುಧವಾರ ಕ್ಷೇತ್ರದಲ್ಲಿ ಕಲಾವಿದರಿಗೆ ಗೆಜ್ಜೆ ಪ್ರದಾನ ಕಾರ್ಯಕ್ರಮ ದೊಂದಿಗೆ ಆರಂಭಗೊಂಡಿತು.

ರಂಗ ಶಂಕರ ಆಡಿಟೋರಿಯಂನಲ್ಲಿ ಅಪಾರ ಮೆಚ್ಚುಗೆ ಗಳಿಸಿದ ಪಾವಂಜೆ ಮೇಳದ ಯಕ್ಷಗಾನ ಪ್ರದರ್ಶನ

ಪಟ್ಲ ಸತೀಶ್ ಶೆಟ್ಟಿ ನೇತ್ರತ್ವದಲ್ಲಿ ರಂಗಭೂಮಿ ಹಾಗೂ ಚಲನಚಿತ್ರದಲ್ಲಿ ಮಿಂಚಿದ ಮೇರುನಟ ದಿ| ಶಂಕರ್ ನಾಗ್ ಇವರ ಧರ್ಮಪತ್ನಿ ಅರುಂಧತಿ ನಾಗ್ ಅವರ ಪರಿಕಲ್ಪನೆಯ  ರಂಗ ಶಂಕರ ಆಡಿಟೋರಿಯಂನಲ್ಲಿ ಪಾವಂಜೆ ಮೇಳದ ಯಕ್ಷಗಾನ ಪ್ರದರ್ಶನ ಪ್ರಬುದ್ಧ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿತು.

ತ್ರಿರಂಗ ಸಂಗಮ ಮುಂಬಯಿ ಇದರ ಸಂಯೋಜನೆಯಲ್ಲಿ ಪಾವಂಜೆ ಮೇಳ

ತ್ರಿರಂಗ ಸಂಗಮ ಮುಂಬಯಿ ಇದರ ಸಂಯೋಜನೆಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಇವರ ಸಾರಥ್ಯದಲ್ಲಿ ನಡೆಯುತ್ತಿರುವ ಪಾವಂಜೆ ಮೇಳದ 2024ರ ಮುಂಬಯಿ ಯಾನದ ಎರಡನೇ ದಿನದ ಕಾರ್ಯಕ್ರಮವು ಅಂಧೇರಿ ಪೂರ್ವದ ಶ್ರೀ ದತ್ತ  ಜಗದಂಬಾ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆಯಿತು.

“ರಾಮ ರಾಮ ಶ್ರೀ ರಾಮ” ಯಕ್ಷಗಾನ ಬಯಲಾಟದ ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಮೀರಾಭಯಂದರ್ ನಲ್ಲಿ ಜರಗಲಿರುವ ಪಾವಂಜೆ ಮೇಳದ  ರಾಮ ರಾಮ ಶ್ರೀ ರಾಮ ಅದ್ದೂರಿ ಯಕ್ಷಗಾನ ಬಯಲಾಟ ಕಾರ್ಯಕ್ರಮದ ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.