ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ e.V. ಉದ್ಘಾಟನೆ

ಅಕ್ಟೊಬರ್ 3. ಜರ್ಮನಿಯು ಏಕೀಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್ ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಇದರ ಯುರೋಪ್ ಘಟಕ ಸ್ಥಾಪಿಸಿ ಔಪಚಾರಿಕವಾಗಿ ಘೋಷಣೆ ಮಾಡುವ ದಿನ.
