yakshadhruvapatlafoundation.org

ಜಿ. ಕೆ ನಾವಡರಿಗೆ ತುರ್ತು ಆರ್ಥಿಕ ಸಹಾಯ ನೀಡಿದ ಪಟ್ಲ ಫೌಂಡೇಶನ್

ಯಕ್ಷಗಾನದ ಪ್ರಸಿದ್ದ ಹಿರಿಯ ಭಾಗವತ ಜಿ. ಕೆ ನಾವಡ ಬಾಯಾರು ಇವರ ಆರೋಗ್ಯ  ತುಂಬಾ ಗಂಭೀರ ಸ್ಥಿತಿಯಲ್ಲಿದ್ದು ಅವರ ಧರ್ಮಪತ್ನಿ ಶ್ರೀದೇವಿ ಯವರು ಮತ್ತು ನಾವಡರ ಸ್ನೇಹಿತ ಕೀರ್ತಿ ಭಟ್ ರವರು ಇಂದು ಪಟ್ಲ ಸತೀಶ್ ಶೆಟ್ಟಿ ಯವರನ್ನು ಭೇಟಿಯಾಗಿ ತುರ್ತು ಆರ್ಥಿಕ ಸಹಾಯಕ್ಕಾಗಿ ಯಕ್ಷದ್ರುವ ಪಟ್ಲ ಫೌಂಡೇಶನ್ ಗೆ ಮನವಿ ಸಲ್ಲಿಸಿದರು.

ಕತೆ ಕೈಲಾಸ ಸಿನಿಮಾಕ್ಕೆ ಮುಹೂರ್ತ

ಲಕುಮಿ ಸಿನಿ ಕ್ರಿಯೇಷನ್‌ ವತಿಯಿಂದ ಶ್ರೀ ಕದಳಿ ಸಿನಿ ಪ್ರೊಡಕ್ಷನ್ ಇವರ ಸೂರಜ್ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ‘ಕತೆ ಕೈಲಾಸ’ ಕನ್ನಡ, ತುಳು ಸಿನಿಮಾದ ಮುಹೂರ್ತ ಸಮಾರಂಭ ಕದ್ರಿ ದೇವಸ್ಥಾನದಲ್ಲಿ ಜರುಗಿತು.

ಯಕ್ಷಧ್ರುವ ಯುವ ಯಕ್ಷಗಾನ ಸ್ಪರ್ಧೆಗೆ ಆಹ್ವಾನ

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಮಂಗಳೂರು ವತಿಯಿಂದ ಯಕ್ಷಧ್ರುವ ಯುವ ಯಕ್ಷಗಾನ ಸರ್ಧೆಯು 2025ರ ಎಪ್ರಿಲ್ ತಿಂಗಳಾಂತ್ಯದಲ್ಲಿ ನಡೆಯಲಿದೆ. ಇದು ತೆಂಕು ಬಡಗುತಿಟ್ಟುವಿನ ಯುವ ಯಕ್ಷಗಾನ ಕಲಾವಿದರ ಬಯಲಾಟ ಸ್ಪರ್ಧೆಯಾಗಿದ್ದು, ಪ್ರಸಕ್ತ ಸ್ಪರ್ಧೆಯಲ್ಲಿ ಮೇಳದಲ್ಲಿ ತಿರುಗಾಟ ಮಾಡಿದ, ತಿರುಗಾಟ ಮಾಡುತ್ತಿರುವ ಕಲಾವಿದರು ಭಾಗವಹಿಸಬಹುದಾಗಿದೆ.

ಯಕ್ಷಶಿಕ್ಷಣದ 1000 ವಿದ್ಯಾರ್ಥಿಗಳ ರಂಗಪ್ರವೇಶ

ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ ಹೌಸ್‌ನ ಮೈದಾನದಲ್ಲಿ ಹಾಕಲಾದ ಎರಡು ವೇದಿಕೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನದ ಬೆಂಡೆ, ಮದ್ದಳೆ, ಹಿಮ್ಮೇಳದ ಅಬ್ಬರಕ್ಕೆ ವಿವಿಧ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಧಿಗಿಣ, ನಾಟ್ಯ, ಕುಣಿತದ ಮೂಲಕ ಗಮನಸೆಳೆದರು.

ಡಿ. 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ “ಯಕ್ಷ ಸಂಭ್ರಮ” ಅದ್ದೂರಿಯಾಗಿ ನಡೆಯಲಿದೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು.

ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭ

ಯಕ್ಷಧ್ರುವ ಪಟ್ಲ ಸತೀಶ್ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು, ಬ್ರಹ್ಮಾವರ ಘಟಕದ 2ನೇ ವಾರ್ಷಿಕೋತ್ಸವ ಸಮಾರಂಭವು 21-11-2024ರಂದು ನೂತನವಾಗಿ ಉದ್ಘಾಟನೆಗೊಂಡ ಶೇಡಿಕೊಡ್ಲು ಮಂದಾರ್ತಿ ದುರ್ಗಾ ಗಾರ್ಡನ್ ಆವರಣದಲ್ಲಿ ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ ಕೊಕ್ಜರ್ಣೆ ಇವರ ಸಭಾಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಿತು. ದಿ| ಚಂದ್ರ ನಾಯ್ಕರ ಧರ್ಮಪತ್ನಿ ಶ್ರೀಮತಿ ವಾಣಿ ಇವರಿಗೆ ನೀಲಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೂ. 25 ಸಾವಿರ ಆಸರೆಯ ಪ್ರೋತ್ಸಾಹಧನ, ಹಿರಿಯ ಕಲಾವಿದ ಅಜ್ರಿ ಗೋಪಾಲ ಗಾಣಿಗ ಇವರಿಗೆ ಮನೆ ನಿರ್ಮಾಣ ಸಹಾಯಾರ್ಥವಾಗಿ ರೂ. 5 ಲಕ್ಷದ ಮೊತ್ತವನ್ನು ನೀಡಲಾಯಿತು.

ಕಾರ್ಕಳ ಘಟಕದ ಒಂಬತ್ತನೇ ‘ಪಟ್ಲ ಸಂಭ್ರಮೋತ್ಸವ’

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕಾರ್ಕಳ ಘಟಕದ ಒಂಬತ್ತನೇ “ಪಟ್ಲ  ಸಂಭ್ರಮೋತ್ಸವ” ಹಾಗೂ ಯಕ್ಷಕಲಾರಂಗ (ರಿ) ಕಾರ್ಕಳ ಇದರ 12ನೇ ವಾರ್ಷಿಕೋತ್ಸವವು ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ  ಕಾರ್ಕಳ  ಮಾರಿಗುಡಿ ವಠಾರದಲ್ಲಿ ನಡೆಯಿತು. ಗೋವಾ ಘಟಕದ ಅಧ್ಯಕ್ಷರಾದ ಉದ್ಯಮಿ ಗಣೇಶ್ ಶೆಟ್ಟಿ,  ರಶ್ಮಿ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ಅಧ್ಯಕ್ಷರಾದ ಡಿ. ಆರ್.‌ರಾಜು ಇವರ ಗೌರವ  ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯು ಮಂಗಳೂರಿನ ಕದ್ರಿಯಲ್ಲಿ ದಿನಾಂಕ: 17/11/2024ರ ರವಿವಾರ ನಡೆಯಿತು.

ಕನ್ಯಾನ ಸದಾಶಿವ ಶೆಟ್ಟರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನಿಂದ ಸಮ್ಮಾನ

ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಕೆ. ಶೆಟ್ಟಿ ಅವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಗೌರವ ಅಭಿನಂದನೆ ಸಲ್ಲಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಅವರು, ಸಮಾಜ ಸೇವೆ ಮಾಡಲು ನನಗೆ ಭಗವಂತ ನೀಡಿರುವ ಆಶೀರ್ವಾದವಾಗಿದ್ದು, ನನ್ನ ಬದುಕಿನ ಸುಯೋಗವಾಗಿದೆ. ಬಡ ಜನತೆಯ ಸೇವೆ ನನಗೆ ತೃಪ್ತಿ ನೀಡಿದೆ. ಸಮಾಜದ ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ ಸಾಧ್ಯವಾಗಿದೆ ಎಂದರು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಉಡುಪಿ ಘಟಕದ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ನಿರುಪಮಾ ಪ್ರಸಾದ್ ಆಯ್ಕೆ

ಪಾವಂಜೆ ಮೇಳದ ಪಂಚಮ ವರ್ಷದ ಯಾನದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕೇಂದ್ರೀಯ ಸಮಿತಿ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ದೇಶ ವಿದೇಶಗಳಲ್ಲಿ 41 ಘಟಕಗಳನ್ನು ಹೊಂದಿದ್ದು, ಇದೀಗ ಉಡುಪಿ ಮಹಿಳಾ ವಿಭಾಗದ ಉದ್ಘಾಟನೆ ನ. 14ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.