ಪಳ್ಳಿ ನಿಂಜೂರು : ಯಕ್ಷ ಶಿಕ್ಷಣ ನಾಟ್ಯ ತರಬೇತಿ

ಯಕ್ಷಧ್ರುವ ಪಟ್ಲ ಪೌಂಡೇಶನ್ ಪಳ್ಳಿ ನಿಂಜೂರು ಇದರ ವತಿಯಿಂದ ಪಳ್ಳಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ ಕಾರ್ಯಕ್ರಮವನ್ನು ಬಹುಮೇಳಗಳ ವ್ಯವಸ್ಥಾಪಕರಾದ ಪಳ್ಳಿ ಕಿಶನ್ ಹೆಗ್ಡೆ ಉದ್ಘಾಟಿಸಿದರು.
ನಿಡ್ಲೆ: ಯಕ್ಷನಾಟ್ಯ ತರಬೇತಿ ಉದ್ಘಾಟನೆ

ದಿನಾಂಕ 18-06-2024 ರಂದು ಅಪರಾಹ್ನ 2.30 ಗಂಟೆಗೆ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರ್ಕಾರಿ ಪ್ರೌಢ ಶಾಲೆ ನಿಡ್ಲೆ, ಬೆಳ್ತಂಗಡಿ ತಾಲೂಕು ಇಲ್ಲಿ 2024-25 ನೇ ಸಾಲಿನ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು.
‘ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮ ಯಕ್ಷಗಾನ’: ಗಿರೀಶ್ ಶೆಟ್ಟಿ

ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ರಮ್ಯ ಅದ್ಬುತ ಕಲೆ ಎಂದು ಗಿರೀಶ್ ಶೆಟ್ಟಿ ಅಧ್ಯಕ್ಷರು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು ಎಕ್ಕಾರು ಘಟಕ ಇವರು ಅಭಿಪ್ರಾಯಪಟ್ಟರು.
ಮಂಚಿ ಕೊಳ್ನಾಡು ಪ್ರೌಢಶಾಲೆ: ಯಕ್ಷಧ್ರುವ – ಯಕ್ಷ ಶಿಕ್ಷಣ ಉದ್ಘಾಟನಾ ಕಾರ್ಯಕ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಇವರು ಸರಕಾರಿ ಪ್ರೌಢ ಶಾಲಾ ಮಕ್ಕಳಿಗೆ ಯಕ್ಷಧ್ರುವ ಯಕ್ಷ ಶಿಕ್ಷಣ ಎನ್ನುವ ವಿಶೇಷ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದ್ದಾರೆ. ಈ ಯಕ್ಷಗಾನ ಕಲಿಕಾ ಯೋಜನೆಯು ಕಳೆದ ಶೈಕ್ಷಣಿಕ ಸಾಲಿನಿಂದ ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಆಯೋಜಿಸುತ್ತಾ ಬರುತ್ತಿದ್ದು, ಎರಡನೇ ಅವಧಿಯ 2024 – 25ನೇ ಶೈಕ್ಷಣಿಕ ಸಾಲಿನ ಯಕ್ಷ ಶಿಕ್ಷಣದ ಉದ್ಘಾಟನಾ ಕಾರ್ಯಕ್ರಮನ್ನು ಮಂಚಿ ಕೊಳ್ನಾಡು ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 14-06-2024 ರಂದು ನೆರವೇರಿಸಲಾಯಿತು.
ಪಟ್ಲ ಸಂಭ್ರಮ: ಧನ್ಯೋತ್ಸವ ಕಾರ್ಯಕ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಅಡ್ಯಾರ್ ಗಾರ್ಡನ್ ನಲ್ಲಿ ‘ಪಟ್ಲ ಸಂಭ್ರಮ-2024’ ಯಶಸ್ವಿಯಾಗಿ ನಡೆದ ಹಿನ್ನಲೆಯಲ್ಲಿ ಅಡ್ಯಾರ್ ನ ಸಂಭ್ರಮ ಸಭಾಂಗಣದಲ್ಲಿ ಧನ್ಯೋತ್ಸವ ಕಾರ್ಯಕ್ರಮ ನಡೆಯಿತು.
ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪದಲ್ಲಿ ನಟ ಕಿಚ್ಚ ಸುದೀಪ್

ಪಟ್ಲ ಫೌಂಡೇಶನ್ ಆಲದ ಮರ ಇದ್ದಂತೆ. ಕಲಾವಿದರ ಕಷ್ಟವನ್ನು ಅರಿತು ಸಂಘಟನೆ ಅವರನ್ನು ಸಲಹುತ್ತಿದೆ. ಪಟ್ಲ ಸತೀಶ್ ಶೆಟ್ಟಿ ಅವರ ಸಾಮಾಜಿಕ ಕಾರ್ಯ ಅದ್ಭುತವಾದದ್ದು. ಅವರ ಬಗ್ಗೆ ತಿಳಿಯುತ್ತಾ ಹೋದಂತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು, ದಾನಿಗಳ ಜೊತೆಗೆ ವೇದಿಕೆ ಹಂಚಿಕೊಳ್ಳಲು ಖುಷಿ ಆಗುತ್ತದೆ ಎಂದು ನಟ ಕಿಚ್ಚ ಸುದೀಪ್ ಹೇಳಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಜರುಗಿದ ಯಕ್ಷಧ್ರುವ ಪಟ್ಟ ಸಂಭ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.
ಬೋಳಿಯಾರಿನಲ್ಲಿ ಯಕ್ಷಗಾನ ಬಯಲಾಟ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು – ಮುಡಿಪು ಘಟಕದ ಆಶ್ರಯದಲ್ಲಿ ಬೋಳಿಯಾರಿನಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ರಾಜಾರಾಮ್ ಭಟ್ ಕೈರಂಗಳ, ಸಂತೋಷ್ ಕುಮಾರ್ ಬೋಳಿಯಾರ್, ವಿನಯಕೃಷ್ಣ ಭಟ್ ಮುಡಿಪು ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ರಾಜಾರಾಮ್ ಭಟ್ ಇವರು ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ಜನಪರ ಕಾರ್ಯಗಳಿಗೆ ರೂ. 50,000 ಮೊತ್ತವನ್ನು ದೇಣಿಗೆಯಾಗಿ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಇವರಿಗೆ ಹಸ್ತಾಂತರಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಸುರತ್ಕಲ್ ಘಟಕದ 4ನೇ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು- ಸುರತ್ಕಲ್ ಘಟಕದ 4ನೇ ವಾರ್ಷಿಕೋತ್ಸವವು ಸುರತ್ಕಲ್ ಭಂಟರ ಭವನದ ಆವರಣದಲ್ಲಿ ನಡೆಯಿತು. ಸುರತ್ಕಲ್ ಘಟಕದ ಅಧ್ಯಕ್ಷರಾದ ಸುಧಾಕರ ಎಸ್. ಪೂಂಜ ಸ್ವಾಗತಿಸಿ ಜಗನ್ನಾಥ ಶೆಟ್ಟಿ ಬಾಳ ಇವರು ಪ್ರಸ್ತಾವನೆಗೈದರು.
ಯಕ್ಷಧ್ರುವ ಪಟ್ಲ ಸಂಭ್ರಮ 2024: ಆಮಂತ್ರಣ ಪತ್ರಿಕೆಯ ಬಿಡುಗಡೆ

ಯಕ್ಷಧ್ರುವ ಪಟ್ಲ ಸಂಭ್ರಮ 2024 ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ಕದ್ರಿ ಮೈದಾನದಲ್ಲಿ ನಡೆಯುತ್ತಿರುವ ಪಾವಂಜೆ ಮೇಳದ ರಂಗವೇದಿಕೆಯಲ್ಲಿ ಕದ್ರಿ ಜೋಗಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಇವರ ಶಿಷ್ಯರು, ಯಕ್ಷಧ್ರುವ ಪಟ್ಲ ಫೌಂಡೇಶನ್’ನ ಸ್ಥಾಪಕಧ್ಯಕ್ಷರು ಮತ್ತು ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಪಟ್ಲ ಸಂಭ್ರಮ 2024 ಇದೇ ಬರುವ 26-05-2024ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್’ನಲ್ಲಿ ನಡೆಯಲಿದೆ.
ಉಡುಪಿಯಲ್ಲಿ 40ನೇ ಘಟಕ ಸ್ಥಾಪನೆ: ಅಧ್ಯಕ್ಷರಾಗಿ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

ಟ್ರಸ್ಟ್ ನ 40ನೇ ನೂತನ ಉಡುಪಿ ಘಟಕದ ಅಧ್ಯಕ್ಷರನ್ನಾಗಿ ” ಸಹಕಾರಿ ರತ್ನ ” ಶ್ರೀ ಜಯಕರ ಶೆಟ್ಟಿ ಇಂದ್ರಾಳಿಯವರನ್ನು ಒಮ್ಮತದೊಂದಿಗೆ ಆಯ್ಕೆ ಮಾಡಲಾಯಿತು. ಶ್ರೀಯುತರು ಹಿರಿಯ ಯಕ್ಷಗಾನ ಸಂಸ್ಥೆ ಯಕ್ಷಗಾನ ಕಲಾಕ್ಷೇತ್ರ ಗುಂಡಿಬೈಲು, ಉಡುಪಿಯ ಗೌರವಾಧ್ಯಕ್ಷರಾಗಿ ಹಾಗೂ ಹಲವಾರು ಪ್ರತಿಷ್ಠಿತ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ.
