yakshadhruvapatlafoundation.org

ಉಡುಪಿ: ಪಾವಂಜೆ ಮೇಳದ ಪಂಚಮ ವರ್ಷದ ಯಾನದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕೇಂದ್ರೀಯ ಸಮಿತಿ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ದೇಶ ವಿದೇಶಗಳಲ್ಲಿ 41 ಘಟಕಗಳನ್ನು ಹೊಂದಿದ್ದು, ಇದೀಗ ಉಡುಪಿ ಮಹಿಳಾ ವಿಭಾಗದ ಉದ್ಘಾಟನೆ ನ. 14ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.

ಮಹಿಳಾ ಘಟಕದ ಅಧ್ಯಕ್ಷೆಯಾಗಿ ನಿರುಪಮಾ ಪ್ರಸಾದ್ ಶೆಟ್ಟಿ ಅವರು ಇತ್ತೀಚೆಗೆ ನಡೆದ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಉದ್ಘಾಟಿಸಲಿದ್ದು ಸಭಾಧ್ಯಕ್ಷತೆಯನ್ನು ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ವಹಿಸಲಿದ್ದಾರೆ.

ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತಸರ ಮೋಹನ್ ಮುದ್ದಣ್ಣ ಶೆಟ್ಟಿ ಕೇಂದ್ರ ಸಮಿತಿಯ ಪ್ರ. ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಉದ್ಯಮಿಗಳಾದ ಪಿ. ಪುರುಷೋತ್ತಮ ಶೆಟ್ಟಿ ದಿವಾಕ‌ರ್ ಶೆಟ್ಟಿ ತೋಟದಮನೆ, ಟ್ರಸ್ಟ್‌ನ ಉಡುಪಿ ಘಟಕದ ಅಧ್ಯಕ್ಷ ಬಿ. ಜಯಕ‌ರ್ ಶೆಟ್ಟಿ ಇಂದ್ರಾಳಿ, ಕಲಾವಿಮರ್ಶಕಿ ಪ್ರತಿಭಾ ಎಂ.ಎಲ್. ಸಾಮಗ ಉಪಸ್ಥಿತಿಯಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದೆ ವಿಂದ್ಯಾ ಆಚಾರ್ಯ ಉಡುಪಿ, ಭಾಗವತರಾದ ಸಿಂಚನಾ ಮೂಡುಕೋಡಿಯವರನ್ನು ಸಮ್ಮಾನಿಸಲಾಗುವುದು.

Leave a Reply

Your email address will not be published. Required fields are marked *