ಅಮೇರಿಕಾದ ಮಿಚಿಗನ್ ನಲ್ಲಿ ಮಿಂಚಿದ ಯಕ್ಷಧ್ರುವ ಪಟ್ಲ ಫೌಂಡೇಶನ್

ನಮ್ಮ ಸಂಸ್ಕೃತಿ, ಕನ್ನಡ ಭಾಷೆ, ಧಾರ್ಮಿಕ ಚಿಂತನೆಗಳ ಶ್ರೀಮಂತಿಕೆಯನ್ಮು ಪ್ರಚುರ ಪಡಿಸುವುದಕ್ಕೆ ಯಕ್ಷಗಾನ ಉತ್ತಮವಾದ ಕಲಾಪ್ರಕಾರ. ರಾಮಾಯಣ, ಮಹಾಭಾರತ, ಭಾಗವತ ಇತ್ಯಾದಿ ಪುರಾಣಗಳ ಪರಿಚಯ ಮತ್ತು ಅಧ್ಯಯನವು ಮನೋರಂಜನಾತ್ಮಕವಾಗಿ ಸಾಮಾನ್ಯರಲ್ಲಿ ಸಾಮಾನ್ಯರಿಗೂ ಸಹ ಜ್ಞಾನಾರ್ಜಿಸುವಲ್ಲಿ ಯಕ್ಷಗಾನದ ಪಾತ್ರ ಬಹಳ ದೊಡ್ಡದು.

ಯಕ್ಷಗಾನದ ನಿಯಮಿತ ಅಭ್ಯಾಸ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ವೃದ್ಧಿಗೂ ಸಹಕಾರಿಯಾಗುತ್ತದೆ. ಸಾಮಾನ್ಯವಾಗಿ ಗಂಡು ಕಲೆ ಎಂದು ಪರಿಗಣಿಸಲ್ಪಟ್ಟ ಕರಾವಳಿಯ ಈ ಕಲೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನೆಲೆಯಲ್ಲಿಯೂ ತನ್ನದೇ ರೀತಿಯಲ್ಲಿ ಸಾಮಾಜಿಕ ಸಂದೇಶವನ್ನು ನೀಡುತ್ತಾ ಬಂದಿದೆ.

ಇಂತಹ ಸಮೃದ್ಧ ಕಲೆ ಯಕ್ಷಗಾನದ ಗಂಧವನ್ನು ಅಮೇರಿಕಾದ ಮಿಚಿಗನವರೆಗೂ ವಿಸ್ತರಿಸಿ ಯಕ್ಷಗಾನವನ್ನು ಕಲಿಯೋಣ, ಕಲೆಯನ್ನು ಉಳಿಸೋಣ ಎಂಬ ಮಹಾತ್ ಚಿಂತನೆಯು “ಮಿಚಿಗನ್ ಯಕ್ಷಗಾನ ಸಂಘ” ಎಂಬ ಕಲಾಸಕ್ತ ಸಂಸ್ಥೆಯ ಹುಟ್ಟಿಗೆ ಮುನ್ನುಡಿ ಬರೆಯಿತು. ಇದರ ಉದ್ಘಾಟನೆಯನ್ನು “ಯಕ್ಷಧ್ರುವ ಪಟ್ಲ ಫೌಂಡೇಶನ್” ನ ಸ್ಥಾಪಕರಾದ ಶ್ರೀಯುತ ಪಟ್ಲ ಸತೀಶ್ ಶೆಟ್ಟಿಯವರು, ಉಡುಪಿ ಎಂ.ಜಿ.ಎಂ. ಕಾಲೇಜಿನ ಮಾಜಿ ಪ್ರಾಂಶುಪಾಲರು, ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ, ಹವ್ಯಾಸಿ ಯಕ್ಷಕಲಾವಿದರಾದ ಶ್ರೀಯುತ ಎಂ.ಎಲ್.ಸಾಮಗ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡದ ಇನ್ನಿತರ ಕಲಾವಿದರು ಹಾಗೂ ಯಕ್ಷಹೆಜ್ಜೆಯ ಗುರುಗಳಾದ ಡಾ. ರಾಜೇಂದ್ರ ಕೆದ್ಲಾಯರೊಡಗೂಡಿ ಮಿಚಿಗನ್ ನ ಸ್ಥಳೀಯ ಕಲಾಪೋಷಕರ ಸಮ್ಮುಖದಲ್ಲಿ ಜ್ಯೋತಿ ಬೆಳಗಿಸುವುದರ ಮೂಲಕ ಆಗಸ್ಟ್ 10ರಂದು ನೆರವೇರಿಸಲಾಯಿತು. ಶ್ರೀಯುತ ಸಾಮಗರು “ಪಟ್ಲ ಫೌಂಡೇಶನ್ ಟ್ರಸ್ಟ್” ಇದರ ಮುಖ್ಯ ಉದ್ದೇಶ,  ಸಂಸ್ಥೆಯು ಈವರೆಗೆ ಮಾಡಿದ ಚಾರಿಟಿ ಕೆಲಸದ ಬಗ್ಗೆ ಸಭಾಸದರಿಗೆ ತಿಳಿಸಿದರು.

ಶ್ರೀಯುತ ಪಟ್ಲರವರು ತಮ್ಮ ಸಂಸ್ಥೆಯ ಮುಂದಿನ ಚಟುವಟಿಕೆಗಳ ಬಗ್ಗೆ ತಿಳಿಸುವುದರ ಜೊತೆಗೆ ಮಿಚಿಗನ್ ಯಕ್ಷಗಾನ ಸಂಘವು ಮುಂದಿನ ದಿನಗಳಲ್ಲಿ ಯಕ್ಷ ಕಲಾವಿದರನ್ನು ಅಮೆರಿಕಾಕಕ್ಕೆ ಆಹ್ವಾನಿಸಿ ಇಲ್ಲಿ ಯಕ್ಷಗಾನವನ್ನು ಮಾಡಿಸುವದರ ಮೂಲಕ ಕಲೆಯನ್ನು ಉಳಿಸಿ ಬೆಳೆಸಲಿ, ಹಾಗೆಯೇ “ಪಟ್ಲ ಫೌಂಡೇಶನ್ ಟ್ರಸ್ಟ್”ಗೆ ಮುಂದೆಯೂ ಇದೇ ರೀತಿ ತಮ್ಮ ಸಹಕಾರವನ್ನು ಮುಂದುವರಿಸಲಿ ಎಂದು ಹಾರೈಸಿದರು.

ಡಾ. ರಾಜೇಂದ್ರ ಕೆದ್ಲಾಯರು ತಮ್ಮ ಶಿಷ್ಯರು  ಆರಂಭಿಸಿದ ಮಿಚಿಗನ್ ಯಕ್ಷಗಾನ ಸಂಘಕ್ಕೆ ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ಶ್ರೀಯುತ ಪ್ರಶಾಂತ್ ಕುಮಾರ್ ಮಟ್ಟುರವರು ಮುಂದಿನ ದಿನಗಳಲ್ಲಿ ತೆಂಕುತಿಟ್ಟಿನ ಯಕ್ಷಗಾನ ಕಲಿಯುವಿಕೆಯ ಬಗ್ಗೆ “ಪಟ್ಲ ಫೌಂಡೇಶನ್”ನ ಸಹಕಾರವನ್ನು ಕೋರುತ್ತಾ, ಮಿಚಿಗನ್ ನಲ್ಲಿ ವಾಸಿಸುತ್ತಿರುವ ಯಕ್ಷ ಕಲಾರಾಧಕರ ಬಳಿ ನಮ್ಮ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಮೇರುಕಲೆ ಯಕ್ಷಗಾನವನ್ನೂ ಬೆಳೆಸೋಣ, ಯಕ್ಷಗಾನ ಕಲಾವಿದರನ್ನು ನಮ್ಮಿಂದ ಸಾಧ್ಯ ವಾದ ರೀತಿಯಲ್ಲಿ ಪ್ರೋತ್ಸಾಹಿ ಸೋಣವೆಂದು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡದ ಕಲಾವಿದರಿಂದ  ದೇವಿ ಮಹಾತ್ಮೆಯ ಉತ್ತರಾರ್ಧ “ಶಾಂಭವಿ ವಿಜಯ” ಎಂಬ ಕಥಾನಕವನ್ನು ಆಡಿ ತೋರಿಸಲಾಯಿತು. ಹಿಮ್ಮೇಳದಲ್ಲಿ ಎಂದಿನಂತೆ ಪಟ್ಲರು ತಮ್ಮ ಗಾನಸುಧೆಯ ಮೂಲಕ ಭವ್ಯ ಸಭಾಂಗಣದಲ್ಲಿ ನೆರೆದ ಎಲ್ಲ ಯಕ್ಷಪ್ರಿಯರಿಗೆ ಕರ್ಣಾನಂದವನ್ನು ಕೊಟ್ಟರು.

ಅವರಿಗೆ ಮದ್ದಳೆ ಮಾಂತ್ರಿಕ, ಯಕ್ಷಗುರು ಶ್ರೀಯುತ ಪದ್ಮನಾಭ ಉಪಾಧ್ಯ ಹಾಗು ಖ್ಯಾತ ಯುವ ಚಂಡೆ ವಾದಕ ಶ್ರೀಯುತ ಚೈತನ್ಯ ಪದ್ಯಾಣರವರು ಚೆಂಡೆಯ ಅಬ್ಬರದಲ್ಲಿ ಪಟ್ಲರ ಮಾಧುರ್ಯದ ಧ್ವನಿಗೆ ಮೆರಗು ತಂದರು.

ಮುಮ್ಮೇಳದಲ್ಲಿ ಚಂಡ ಮುಂಡರಾಗಿ ಚಂದ್ರಶೇಖರ ಧರ್ಮಸ್ಥಳ ಮತ್ತು ಮಹೇಶ ಮಣಿಯಾಣಿಯವರು ಬಹಳ ಅದ್ಭುತವಾದ ನಾಟ್ಯ ವೈವಿಧ್ಯಗಳಿಂದ ಜನರ ಮನಸ್ಸನ್ನು ಸೂರೆಗೊಂಡರು. ಶಾಂಭವಿಯಾಗಿ ಪ್ರಸಿದ್ಧ ಸ್ತ್ರೀ ವೇಷಧಾರಿ ಶ್ರೀ ಪ್ರಶಾಂತ ಶೆಟ್ಟಿ ನೆಲ್ಯಾಡಿ ಸ್ತ್ರೀಯರನ್ನೇ ನಾಚಿಸುವಂತೆ ಒನಪು ವಯ್ಯಾರಗಳಿಂದ ಮಿಂಚಿದರೆ, ದೇವೇಂದ್ರನಾಗಿ ಸಾಮಗರು ವಿಜೃಂಭಿಸಿದರು.

ರಕ್ತಬೀಜನಾಗಿ ಶ್ರೀಮೋಹನ್ ಬೆಳ್ಳಿಪಾಡಿ ಯವರು ಹಾಗೂ  ಪ್ರಸಿದ್ಧ ಬಣ್ಣದ ವೇಷಧಾರಿ  ಶ್ರೀ ಹರಿನಾರಾಯಣ ಭಟ್ ಎಡನೀರು ಶುಂಭನ ಪಾತ್ರದಲ್ಲಿ ಅಬ್ಬರಿಸಿ  ಪ್ರಸಂಗಕ್ಕೆ ಜೀವತುಂಬಿದರು. ಸ್ಥಳೀಯ ಹವ್ಯಾಸಿ ಕಲಾವಿದರಾದ ಸಂಘದ ಉಪಾಧ್ಯಕ್ಷರಾದ ಶ್ರೀ ಪುರುಷೋತ್ತಮ ಮರಕಡರವರು ಸುಗ್ರೀವನ ಪಾತ್ರದಲ್ಲಿ, ರಕ್ತೇಶ್ವರಿಯಾಗಿ ಸಂಘದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ರವರು ಮತ್ತು ಕಾಳಿಯ ಪಾತ್ರದಲ್ಲಿ ಚಿ. ಪ್ರಹ್ಲಾದ್ ರಾವ್  ಅತ್ಯುತ್ತಮವಾಗಿ ಅಭಿನಯಿಸಿ ಕೊಟ್ಟ ಪಾತ್ರದ ಘನತೆ ಕಾಪಾಡಿ ಯಕ್ಷಪ್ರಿಯರ ಚಪ್ಪಾಳೆಗಿಟ್ಟಿಸಿಗೊಂಡರು.

ಸ್ಥಳೀಯ ಬಾಲ ಪ್ರತಿಭೆಗಳಾದ ಅಲ್ಪನ  ರಾಜಗೋಪಾಲ್, ನಿಧಿ ಅನಿಲ್ ಭಟ್, ಸ್ಮೃತಿ ಮಹೇಶ್, ರಿತಿಕಾ  ರಾವ್, ಶರ್ವಾಣಿ ಬಿಕ್ಕುಮಲ,  ಶ್ರಿಯಾ ರೋಹಿತ್  ಹಾಗೂ ಸನ್ನಿಧಿ ರಾವ್ ಸಪ್ತಮಾತೃಕೆಯರಾಗಿ  ಮತ್ತು ರಕ್ತಬೀಜಾದಿಗಳಾಗಿ ಇಶಾನ್ ಹೆಬ್ಬಾರ್, ಸಂವಿತ್  ಮಹೇಶ್, ಅಕ್ಷಜ್ ನಿಖಿಲ್  ಜೋಶಿ ಹಾಗೂ ಅಭಿನವ್  ರಾವ್ ಉತ್ತಮವಾಗಿ ಅಭಿನಯಿಸಿದರು. ಈ ಯಕ್ಷ ರಸದೌತಣದ ಸೊಬಗನ್ನು ಪ್ರೇಕ್ಷಕರು ಸಂಭ್ರಮದಿಂದ ಕಣ್ತುಂಬಿಕೊಂಡು ಕಲಾದೇವಿಯ ಮೆರುಗನ್ನು ಇಳಿಸಂಜೆಯ ಹೊಂಬೆಳಕಲ್ಲಿ ವೀಕ್ಷಿಸಿ ಪುನೀತರಾದರು.

ಸಭಾ ಕಾರ್ಯಕ್ರಮವು ಶ್ರೀಮತಿ ವಾಣಿ ರಾವ್ ಅವರ ಪ್ರಾರ್ಥನೆಯ ಮೂಲಕ ಆರಂಭಗೊಂಡಿತು. ಸಂಘದ ಕಾರ್ಯದರ್ಶಿಯಾದ ಶ್ರೀ ಹರೀಶ್ ರಾವ್ ರವರು ಸ್ವಾಗತ ಭಾಷಣ ಮಾಡಿದರು. ಕೋಶಾಧಿಕಾರಿಗಳಾದ ಶ್ರೀ ವೆಂಕಟೇಶ್ ಪೊಳಲಿಯವರು ಪ್ರಸಂಗದ ಕಥಾ ಸಾರಾಂಶವನ್ನು ಸಭಾಸದರಿಗೆ ವಾಚಿಸಿದರು. ದೇವಿಯ ಉಯ್ಯಾಲೆಯನ್ನು ಶ್ರೀಮತಿ ಪಲ್ಲವಿ ರಾವ್, ಶ್ರೀಮತಿ ದಿವ್ಯ ಪೊಳಲಿ, ಶ್ರೀಮತಿ ಮೇಧಿನಿ ಕಟ್ಟಿ, ಶ್ರೀಮತಿ ಸೌಮ್ಯ ರಾವ್ ಮತ್ತು ಶ್ರೀಮತಿ ರಂಜನಾ ರಾವ್ ರವರು ಅತ್ಯುತ್ತಮ ವಾಗಿ ಅಲಂಕರಿಸಿ ಎಲ್ಲರ ಹೊಗಳಿಕೆಗೆ ಪಾತ್ರರಾದರು.

ಫೋಟೋಗ್ರಾಫರ್ ಆಗಿ ಶ್ರೀ ಸಂದೀಪ್ ನಾಯಕ್ ರವರು, ಆಡಿಯೋ ವಿಭಾಗದಲ್ಲಿ ಶ್ರೀ ಕಿಶೋರ್ ರವರು ಸಹಕಾರವಿತ್ತರು. ಪಂಪ ಕನ್ನಡ ಕೂಟ, ಲಾನ್ಸಿಂಗ್ ಕನ್ನಡ ಕೂಟ, ಮಿಚಿಗನ್ ತುಳು ಬಾಂಧವರು ಹಾಗೂ ಹಲವಾರು ಸಂಸ್ಥೆಯ ಗಣ್ಯರು ಕಾರ್ಯಕ್ರಮ ದಲ್ಲಿ ಭಾಗವಹಿಸಿ, ಯಕ್ಷಗಾನದ ಮೆರಗನ್ನು ಹೆಚ್ಚಿಸಿದರು. ಸಹ ಕೋಶಾಧಿಕಾರಿಗಳಾದ ಶ್ರೀ ಅನಿಲ್  ಭಟ್ ರವರು ಮತ್ತು ಜೊತೆ ಕಾರ್ಯದರ್ಶಿಗಳಾದ ಶ್ರೀ ಸಂತೋಷ್ ಗೋಳಿಯವರು ಸಹಾಯ ಮಾಡಿದ ಎಲ್ಲ ದಾನಿಗಳನ್ನು ನೆನೆಯುತ್ತ ಧನ್ಯವಾದ ಸಮರ್ಪಣೆ ಮಾಡಿದರು.

ವರದಿ : ಪ್ರಶಾಂತ ಕುಮಾರ್, ಟ್ರಾಯ್  ಮಿಚಿಗನ್ , ಯು.ಎಸ್.ಎ
Source: karavalixpress

LATEST POST
ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ

Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ – 2025: ಆಮಂತ್ರಣ ಪತ್ರಿಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಯಕ್ಷಧ್ರುವ ಪಟ್ಲ ದಶಮ ಸಂಭ್ರಮ - 2025 ರಾಷ್ಟ್ರೀಯ ಕಲಾ ಸಮ್ಮೇಳನ ದಿನಾಂಕ ▪️ 01.06.2025 ಆದಿತ್ಯವಾರ ಸ್ಥಳ▪️ ಅಡ್ಯಾರ್ ಗಾರ್ಡನ್,ಮಂಗಳೂರು ಆಮಂತ್ರಣ ಪತ್ರಿಕೆ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ “ಭಾರತ್ ಕಲಾ ವೈಭವ”

ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕವು ಮೇ 10, 2025 ರಂದು ಜರ್ಮನಿಯ ಅಲ್ಸ್ಬಾಕ್‌ನಲ್ಲಿ "ಭಾರತ್ ಕಲಾ ವೈಭವ" ಸಾಂಸ್ಕೃತಿಕ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಸಾಂಸ್ಕೃತಿಕ ಉತ್ಸವವು ನಮ್ಮ ಫೌಂಡೇಶನ್‌ಗಾಗಿ ಹೆಮ್ಮೆಗುರಿಯಾಗಿದೆ, ಯಾಕಂದರೆ ಇದು ಭಾರತದ ಕಲೆಗಳು ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಯೂರೋಪಿನ...

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ: 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆ ಮೇ7ರಂದು ಮಂಗಳೂರಿನ ಪತ್ತುಮುಡಿ ಹೋಟೆಲ್ ನಲ್ಲಿ ನಡೆಯಿತು. ವಿಶೇಷವಾಗಿ ಫೌಂಡೇಶನ್ನ ಪೋಷಕರಾದ ಸುರೇಶ್ ಭಂಡಾರಿ ಕಡಂದಲೇ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಮುಖ್ಯಸ್ಥರು ಸೀತಾರಾಮ್ ತೋಲ್ಪಡಿತ್ತಯರು, ಹಾಗೂ ಎಲ್ಲಾ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಈ...

A New Beginning: Housewarming Held for 36th Artist Home by Patla Foundation

ಬೇಬಿ ಮತ್ತು ಬಾಲಕೃಷ್ಣ ಪುರುಷ ರಿಗೆ ಪಟ್ಲ ಯಕ್ಷಾಶ್ರಯದ 36ನೇ ಮನೆ

Mangaluru News: ಹಲವು ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವ ಪಟ್ಲ ಫೌಂಡೇಶನ್‌ ವತಿಯಿಂದ, ಇನ್ನೋರ್ವ ಕಲಾವಿದರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ವಿಶೇಷ ಅಂದ್ರೆ ಇದು ಪಟ್ಲ ಫೌಂಡೇಶನ್‌ ವತಿಯಿಂದ ಕಲಾವಿದರಿಗೆ ನೀಡುತ್ತಿರುವ 36ನೇ ಮನೆಯಾಗಿದೆ. ಬೇಬಿ ಮತ್ತು ಬಾಲಕೃಷ್ಣ ಪುರುಷ ಎಂಬುವವರಿಗೆ ಪರುವಾಯಿಯ ಓಣಿ ಬಾಗಿಲು...

With 36 Homes Delivered, Patla Foundation Breaks Ground on 20 More for Artists

ಪಟ್ಲ ಯಕ್ಷಾಶ್ರಯದಡಿ 20 ಮನೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಶೃಂಗೇರಿ ಶ್ರೀಗಳು

Mangaluru News: ಎಷ್ಟೋ ಯಕ್ಷಗಾನ ಕಲಾವಿದರಿಗೆ ಪಟ್ಲ ಯಕ್ಷಾಶ್ರಯದಡಿ ಹಲವು ಮನೆಗಳನ್ನು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಟ್ಟಿ ಕೊಟ್ಟಿದ್ದಾರೆ. ಅದೇ ರೀತಿ, ಉಡುಪಿಯಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಹಲವು ಯಕ್ಷಗಾನ ಕಲಾವಿದರಿಗಾಗಿ ಮನೆ ನಿರ್ಮಿಸಲು ಭಾಗವತರು ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ 36 ಮನೆಗಳನ್ನು...

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ರಕ್ತದಾನ ಶಿಬಿರ ಯಶಸ್ವಿ

ಬಹ್ರೈನ್ – ಯಕ್ಷಧ್ರುವ ಪಟ್ಲ ಫೌಂಡೇಶನ್ ಬಹ್ರೈನ್ ಮತ್ತು ಸೌದಿ ಘಟಕವು ತಮ್ಮ ಮೂರನೇ ವಾರ್ಷಿಕ ರಕ್ತದಾನ ಶಿಬಿರವನ್ನು ಸಲ್ಮಾನಿಯಾ ಮೆಡಿಕಲ್ ಕಾಂಪ್ಲೆಕ್ಸ್‌ನ ಸೆಂಟ್ರಲ್ ಬ್ಲಡ್ ಬ್ಯಾಂಕ್‌ನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಸಂಜೆ 7:00 ಗಂಟೆಯಿಂದ ರಾತ್ರಿ 11:30ರವರೆಗೆ ನಡೆದ ಈ ಶಿಬಿರದಲ್ಲಿ 80 ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು.

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಜೂನ್ 1ರಂದು ಪಟ್ಲ ದಶಮ ಸಂಭ್ರಮ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ. ಯಕ್ಷಗಾನ ಕ್ಷೇತ್ರ ಇಂದು ಪಟ್ಲ ಸತೀಶ್ ಶೆಟ್ಟಿ ಅವರಿಂದ ನಾಡಿನೆಲ್ಲೆಡೆ ಬೆಳಗುತ್ತಿದೆ. ಇದು ಬಹಳ ಸಂತಸದ ವಿಚಾರ. ಯಕ್ಷಗಾನದ ಮೇಲಿನ ಭಕ್ತಿ ಶ್ರದ್ಧೆಯಿಂದ ನಾವೆಲ್ಲರೂ ಜೊತೆಯಾಗಿದ್ದೇವೆ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುತ್ತಿರುವ ಇಂತಹ ಸಂಘಟನೆ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.