yakshadhruvapatlafoundation.org

ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕಲೆ ಬೆಳೆದ ರೀತಿ, ಗೋವಾದಲ್ಲಿ ನೀವೆಲ್ಲರೂ ಸೇರಿ ಕಲೆ ಬೆಳೆಸಿದ ವಿಷಯ ತಿಳಿದು ನನಗೆ ಹೆಮ್ಮೆ ಅನಿಸುತ್ತದೆ. ಯಕ್ಷಗಾನ ಆರಾಧನಾ ಕಲೆ, ಸಂಸ್ಕೃತಿ, ಸಂದೇಶ ಸಾರುವ ಕಲೆ ಎಂದು ಪಟ್ಲ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಶ್ರೇಷ್ಠ ಭಾಗವತರಾದ ಸತೀಶ್ ಶೆಟ್ಟಿ ಪಟ್ಲ ನುಡಿದರು.

ಪಟ್ಲ ಫೌಂಡೇಶನ್ ಗೋವಾ ರಾಜ್ಯ ಘಟಕದ ಅಧ್ಯಕ್ಷರಾದ ಗಣೇಶ್ ಶೆಟ್ಟಿರವರ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಪಟ್ಲ ಫೌಂಡೇಶನ್ ವತಿಯಿಂದ ಗೋವಾದಲ್ಲಿನ ಕನ್ನಡ ಮತ್ತು ಇತರ ಶಾಲೆಯ ಮಕ್ಕಳಿಗೂ ಯಕ್ಷ ಶಿಕ್ಷಣ ನೀಡೋಣ ಎಂದು ಸತೀಶ್ ಶೆಟ್ಟಿ ಪಟ್ಲ ನುಡಿದರು. ತುಳು ಕುಟದ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಅವರು ಸತೀಶ್ ಶೆಟ್ಟಿ ರವರಿಗೆ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಗೋವಾ ಕನ್ನಡ ಸಮಾಜ ಪಣಜಿ ಅಧ್ಯಕ್ಷರಾದ ಅರುಣ್ ಕುಮಾರ್ ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಮಲ್ಲಿಕಾರ್ಜುನ ಬಾದಾಮಿಯವರು ಪಟ್ಲ ಸತೀಶ್ ಶೆಟ್ಟಿಯವರಿಗೆ ಗೋವಾ ಕನ್ನಡ ಸಮಾಜದ ಬಗ್ಗೆ ವಿವರ ನೀಡಿದರು. ಮುಂಬರುವ ದಿನಗಳಲ್ಲಿ ಗೋವಾದಲ್ಲಿ ಗಾನ ವೈಭವ ಕಾರ್ಯಕ್ರಮ ನಡೆಸಿಕೊಡಬೇಕೆಂದು ಕೇಳಿಕೊಂಡಾಗ ಅದಕ್ಕೆ ಪಟ್ಲ ಸತೀಶ್‌ ಶೆಟ್ಟಿ ರವರು ಒಪ್ಪಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಗೋವಾ ಕನ್ನಡ ಸಮಾಜದ ವತಿಯಿಂದ ಸತೀಶ್ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಮಣ್ಯ ಶೆಟ್ಟಿ, ಜಗದೀಶ ಶೆಟ್ಟಿ, ದಿನೇಶ್ ಮೊಗವೀರ, ಶಶಿಧರ್ ರೈ, ಪ್ರಶಾಂತ್ ಶೆಟ್ಟಿ, ಶರತ್ ಶೆಟ್ಟಿ, ಗಣೇಶ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *