yakshadhruvapatlafoundation.org

ಆಲಂಕಾರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಕಡಬ ತಾಲ್ಲೂಕು ಘಟಕದ ವತಿಯಿಂದ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಛಾಯಾನಂದನ ಯಕ್ಷಗಾನ ಬಯಲಾಟ ನಡೆಯಿತು.ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರನ್ನು ಕಡಬ ತಾಲ್ಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಕಡಬ ತಾಲ್ಲೂಕು ಘಟಕದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು ರವರು ಯಕ್ಷಧ್ರುವ ಪಟ್ಲ ಪೌಂಡೇಶನ್ ವತಿಯಿಂದ ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ತಿಳಿಸಿ ಅಭಿನಂದನೆ ಸಲ್ಲಿಸಿದರು. ನಂತರ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಯವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಕಡಬ ತಾಲ್ಲೂಕು ಘಟಕದ ವತಿಯಿಂದ ಸನ್ಮಾನಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಶ್ರೀ ದೇವಿಯ ಅನುಗ್ರಹ ದಿಂದ ಭಕ್ತರ ಸಹಕಾರದೊಂದಿಗೆ ವಿಜೃಂಭಣೆಯಿಂದ ನಡೆಯಲಿ ಎಂದು ತಿಳಿಸಿದರು.

ಕಡಬ ತಾಲ್ಲೂಕು ಘಟಕದ ಸಂಚಾಲಕರು,ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹೇಮಂತ್ ರೈ ಮನವಳಿಕೆಗುತ್ತು ರವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಕಡಬ ತಾಲ್ಲೂಕು ರಚನೆಯ ಬಗ್ಗೆ ತಿಳಿಸಿ ಶರವೂರು ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಪಾನೆಯ ಶುಭ ಸಂಧರ್ಭದಲ್ಲಿ ಮಾ.30 ರಂದು ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ಪಾವಂಜೆ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ ಎಂದು ತಿಳಿಸಿದರು ಗಣರಾಜ್ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್ ನಗ್ರಿ,ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು,ಪಟ್ಲ ಫೌಂಡೇಶನ್ ಕಡಬ ತಾಲ್ಲೂಕಿನ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಪಡ್ಡಿಲ್ಲಾಯ ಯಕ್ಷಧ್ರುವ ಪಟ್ಲ ಫೌಂಡೇಶನ್ ಉಪಾಧ್ಯಕ್ಷರಾದ ರಾಧಾಕೃಷ್ಣ ರೈ ಪರಾರಿಗುತ್ತು, ವಿಠಲ ರೈ ಕೊಣಾಲುಗುತ್ತು ,ಮುತ್ತಪ್ಪ ಪೂಜಾರಿ ನೈಯ್ಯಲ್ಗ,ಕಾರ್ಯದರ್ಶಿ ಎಸ್.ವಿ ಪ್ರಸಾದ್ ಕಣಿಪುರ,ಕೋಶಾಧಿಕಾರಿ ಮಮತಾ ಶೆಟ್ಟಿ ಅಂಬರಾಜೆ, ಜತೆ ಕಾರ್ಯದರ್ಶಿ ಜನಾರ್ಧನಾ ಕಯ್ಯಾಪೆ ಉಪಸ್ಥಿತರಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಕಡಬ ತಾಲ್ಲೂಕು ಸದಸ್ಯರು ಸಹಕರಿಸಿದರು.ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರ ಛಾಯನಂದನ ಯಕ್ಷಗಾನ ಬಯಲಾಟ ಮನಸೋರೆಗೊಂಡಿತ್ತು.

Leave a Reply

Your email address will not be published. Required fields are marked *