ಪಟ್ಲ ಸತೀಶ್ ಶೆಟ್ಟಿ ನೇತ್ರತ್ವದಲ್ಲಿ ರಂಗಭೂಮಿ ಹಾಗೂ ಚಲನಚಿತ್ರದಲ್ಲಿ ಮಿಂಚಿದ ಮೇರುನಟ ದಿ| ಶಂಕರ್ ನಾಗ್ ಇವರ ಧರ್ಮಪತ್ನಿ ಅರುಂಧತಿ ನಾಗ್ ಅವರ ಪರಿಕಲ್ಪನೆಯ ರಂಗ ಶಂಕರ ಆಡಿಟೋರಿಯಂನಲ್ಲಿ ಪಾವಂಜೆ ಮೇಳದ ಯಕ್ಷಗಾನ ಪ್ರದರ್ಶನ ಪ್ರಬುದ್ಧ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿತು. ಕಾರ್ಯಕ್ರಮ ವೀಕ್ಷಿಸಿ ಕಲಾವಿದರನ್ನು ಪ್ರೋತ್ಸಾಹಿಸಿದ್ದಲ್ಲದೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಕಾರ್ಯಸಾಧನೆಗಳ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು. ಪಟ್ಲ ಸತೀಶ್ ಶೆಟ್ಟಿಯವರ ಆಪ್ತರಾದ ಗೋಪಿ ಭಟ್, ಹೇಮಂತ್ ರೈ ಮತ್ತು ಮಧುಶ್ರಿ ಜೊತೆಗಿದ್ದರು

ತುಳುನಾಡ ಪರಿಪೂರ್ಣ ಕಲೆ ಯಕ್ಷಗಾನ: ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ
Mangaluru: ಜೂನ್ 1 2025ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ಮೈದಾನದಲ್ಲಿ 10ನೇ ವರ್ಷದ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಸುಮಾರು 30 ಸಾವಿರಕ್ಕೂ ಅಧಿಕ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬೆಳಿಗ್ಗೆ ಸರಿಯಾಗಿ 8 ಗಂಟೆಗೆ ಅಬ್ಬರ ತಾಳದಿಂದ ಶುರುವಾದ ಕಾರ್ಯಕ್ರಮ ರಾತ್ರಿಯವರೆಗಗೂ ಸರಿಯಾದ ಸಮಯ...